Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಹಾಳಾಗದೆ ಉಳಿದ ಸ್ವಲ್ಪ ಅಷ್ಡೋದ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನ ಎಲ್ಲಾ ಜನರು, ಬಗೆಬಗೆಯ ಎಲ್ಲಾ ವಿದೇಶೀಯರು, ಊಚ್ ದೇಶದ ಎಲ್ಲಾ ಅರಸರು, ಫಿಲಿಷ್ಟಿಯ ದೇಶದ ಎಲ್ಲಾ ಅರಸರು, ಅಷ್ಕೆಲೋನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಎಲ್ಲಾ ಅರಬೀಯರು ಮತ್ತು ಧಿಚ್ ದೇಶದ ಎಲ್ಲಾ ರಾಜರು ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆ. ಫಿಲಿಷ್ಟಿಯ ದೇಶದ ಎಲ್ಲಾ ರಾಜರು ಅಂದರೆ ಅಷ್ಕೆಲೋನ್, ಗಾಜಾ, ಎಕ್ರೋನ್ ಮತ್ತು ಅಷ್ಡೋದಿನ ಶೇಷಭಾಗದ ರಾಜರು ಈ ಪಾನಪಾತ್ರೆಯಿಂದ ಕುಡಿಯುವಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ವಿದೇಶೀಯ ಜನರೆಲ್ಲರಿಗೂ, ಊಚ್ ದೇಶದ ಅರಸರೆಲ್ಲರಿಗೂ, ಫಿಲಿಷ್ಟಿಯ ದೇಶದ ಅರಸರಾದ, ಅಷ್ಕೆಲೋನಿಗೂ, ಗಾಜಕ್ಕೂ, ಎಕ್ರೋನಿಗೂ, ಅಷ್ಡೋದಿನ ಉಳಿದವರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:20
19 ತಿಳಿವುಗಳ ಹೋಲಿಕೆ  

ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


“‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’”


ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.


ಖಡ್ಗವು ಅವರ ಅಶ್ವಗಳನ್ನೂ, ರಥಗಳನ್ನೂ, ಬಾಬೆಲಿನಲ್ಲಿರುವ ಬಗೆಬಗೆಯ ವಿದೇಶೀಯರನ್ನೆಲ್ಲ ಹೊಡೆಯಲಿ! ಅವರು ಹೆಂಗಸರಂತೆ ಬೆದರುವರು, ಖಡ್ಗವು ಅವರ ಸಂಪತ್ತನ್ನು ನುಂಗಲಿ! ಅವರು ಸೂರೆಗೆ ಈಡಾಗುವರು.


ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ದೋದಿಗೆ ಬಂದು ಅದರ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿಕೊಂಡನು.


ಅರಬಿಯದ ಎಲ್ಲಾ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯವರ ಎಲ್ಲಾ ಅರಸರು,


ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಬಂದಿದ್ದರು. ಕುರಿದನಗಳ ಹಿಂಡೂ ಪಶುಗಳೂ ಅವರ ಸಂಗಡ ಹೊರಟುಹೋದವು.


ಶೇಮನ ಸಂತಾನದವರು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್ ಎಂಬುವರು.


ಫಿಲಿಷ್ಟಿಯರು ಯೆಹೋವನಿಗೆ ಸಮರ್ಪಿಸಿದ ಚಿನ್ನದ ಗಡ್ಡೆಗಳು ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಊರು, ಎಕ್ರೋನ್ ಎಂಬ ಅವರ ಸಂಸ್ಥಾನಗಳ ಸಂಖ್ಯೆಗಳಿಗೂ


ಅವರು ಯಾರೆಂದರೆ: ಅವನ ಚೊಚ್ಚಲಮಗನಾದ ಊಚ್, ಇವನ ತಮ್ಮನಾದ ಬೂಜ್, ಅರಾಮನ ತಂದೆಯಾದ ಕೆಮೂವೇಲನು.


ಅರಾಮ್ ಸಂತಾನದವರು - ಊಸ್, ಹೂಲ್, ಗೆತೆರ್, ಮಷ್ ಎಂಬವರು.


ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.


ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು