Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಕುರುಬರು ಓಡಿಹೋಗುವುದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ನಾಯಕರು ತಪ್ಪಿಸಿಕೊಳ್ಳುವುದಕ್ಕೆ ಆಸ್ಪದ ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಕುರಿಗಾಹಿಗಳು ಓಡಿಹೋಗುವುದಕ್ಕೆ ದಾರಿ ಸಿಕ್ಕದು ಮೇಷಪಾಲರು ತಲೆತಪ್ಪಿಸಿಕೊಳ್ಳಲಿಕ್ಕೆ ಆಸ್ಪದ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಕುರುಬರು ಓಡಿಹೋಗುವದಕ್ಕೆ ಮಾರ್ಗವು ಸಿಕ್ಕದು, ಮಂದೆಯ ಹಿರಿಯ ಮಣಿಗಳು ತಪ್ಪಿಸಿಕೊಳ್ಳುವದಕ್ಕೆ ಆಸ್ಪದ ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಕುರುಬರಿಗೆ ಅಡಗಿಕೊಳ್ಳಲು ಸ್ಥಳ ಸಿಕ್ಕುವದಿಲ್ಲ. ಆ ನಾಯಕರುಗಳಿಗೆ ತಪ್ಪಿಸಿಕೊಳ್ಳಲು ಅವಕಾಶ ಸಿಕ್ಕುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಕುರುಬರಿಗೆ ಓಡಿ ಹೋಗುವುದಕ್ಕೂ, ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವುದಕ್ಕೂ ಮಾರ್ಗವಿಲ್ಲದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:35
21 ತಿಳಿವುಗಳ ಹೋಲಿಕೆ  

ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”


ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳಲಾರನು. ಬಲಿಷ್ಠನು ತನ್ನ ಬಲವನ್ನು, ತನ್ನ ಪ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳಲಾರನು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.”


ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು; ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರ್ಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.”


ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.


ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.


ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.


ಮತ್ತು ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ವಶವಾಗುವುದು ಖಂಡಿತ, ಅವನಿಗೆ ಸಾಕ್ಷಾತ್ತಾಗಿ ನಿಂತು ಎದುರೆದುರಾಗಿ ಮಾತನಾಡುವನು.


ನಾನು ನನ್ನ ಬಲಗಡೆಗೆ ನೋಡಲು, ಅಲ್ಲಿ ಸಹಾಯಕರು ಯಾರೂ ಇಲ್ಲ, ಆಶ್ರಯವೂ ನಾಶವಾಯಿತು, ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ಆಹಾ, ಕುರುಬರ ಕೂಗಾಟ! ಮಂದೆಯ ಹಿರಿಯ ನಾಯಕರ ಅರಚಾಟ! ಯೆಹೋವನು ಆ ಹುಲ್ಗಾವಲನ್ನು ಹಾಳುಮಾಡುತ್ತಿದ್ದಾನಲ್ಲಾ.


ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು