Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, “ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಈ ನುಡಿಯನ್ನು ಕೇಳಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ - ನೀವು ನನ್ನ ಮಾತುಗಳನ್ನು ಕೇಳದ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸರ್ವಶಕ್ತನಾದ ಯೆಹೋವನು ಹೀಗೆಂದನು: “ನೀವು ನನ್ನ ಸಂದೇಶಗಳನ್ನು ಕೇಳಿ ಅದರಂತೆ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ನನ್ನ ಮಾತುಗಳನ್ನು ಕೇಳದ ಕಾರಣ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:8
8 ತಿಳಿವುಗಳ ಹೋಲಿಕೆ  

ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ಕೆಣಕಿ ನಿಮಗೆ ನೀವೇ ಕೇಡನ್ನು ತಂದುಕೊಂಡಿದ್ದೀರಿ” ಎಂದು ಹೇಳಿದನು.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.


ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ


“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.


ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


ಅವರು ನನ್ನ ಮಾತುಗಳನ್ನು ಕೇಳಲಿಲ್ಲವಲ್ಲಾ; ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಅವರ ಬಳಿಗೆ ತಪ್ಪದೆ ಕಳುಹಿಸಿ ಎಚ್ಚರಿಸುತ್ತಾ ಬಂದರೂ ಅವರು ಕೇಳಲೊಲ್ಲದೆ ಹೋದರು ಇದು ಯೆಹೋವನ ನುಡಿ.”


ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು