Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 25:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದ್ದರಿಂದ ನಾನು ಉತ್ತರದ ಎಲ್ಲಾ ಜನಾಂಗಗಳನ್ನು ಕರೆಸುತ್ತೇನೆ.” ಇದು ಯೆಹೋವನ ಸಂದೇಶ. “ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಕೂಡಲೇ ಕರೆಸುವೆನು. ಅವನು ನನ್ನ ಸೇವಕ. ನಾನು ಆ ಜನರನ್ನು ಯೆಹೂದ ದೇಶದ ವಿರುದ್ಧವಾಗಿಯೂ ಯೆಹೂದ್ಯರ ವಿರುದ್ಧವಾಗಿಯೂ ತರುತ್ತೇನೆ. ನಾನು ನಿಮ್ಮ ಸುತ್ತಮುತ್ತಲಿನಲ್ಲಿದ್ದ ಜನಾಂಗಗಳ ವಿರುದ್ಧವಾಗಿಯೂ ಅವರನ್ನು ಕರೆತರುವೆನು. ನಾನು ಆ ದೇಶಗಳನ್ನೆಲ್ಲ ನಾಶಮಾಡುವೆನು. ನಾನು ಆ ಭೂಮಿಗಳನ್ನು ಶಾಶ್ವತವಾಗಿ ಬರಿದಾದ ಮರುಭೂಮಿಗಳನ್ನಾಗಿ ಮಾಡುವೆನು. ಜನರು ಆ ದೇಶಗಳನ್ನು ನೋಡಿ ಅವು ಹಾಳಾಗಿರುವುದನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 25:9
48 ತಿಳಿವುಗಳ ಹೋಲಿಕೆ  

ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.


ನಾನು ಆರಿಸಿಕೊಂಡ ಪರಿಶುದ್ಧರಿಗೆ ಅಪ್ಪಣೆ ಕೊಟ್ಟಿದ್ದೇನೆ. ಹೌದು, ನನ್ನ ಜಯದಲ್ಲಿ ಹೆಮ್ಮೆಪಡುವವರು, ನನ್ನ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆದಿದ್ದೇನೆ.


‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಗ್ರಸ್ತರಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.


“ಬಾಬೆಲಿನ ಅರಸನು ಬಂದು, ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಅನ್ನುತ್ತಾನೆ” ಎಂದು ಹೇಳಿದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.


ಆಗ ಕಾವಲು ದಂಡಿನ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ ಅವನಿಗೆ, “ನಿನ್ನ ದೇವರಾದ ಯೆಹೋವನು ಈ ಸ್ಥಳಕ್ಕೆ ಇಂಥ ಕೆಡುಕಾಗಲಿ ಎಂದು ಶಾಪಕೊಟ್ಟನು.


ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.


“ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.


ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.


ಯೆಹೋವನು ನಿಮ್ಮನ್ನು ನಡೆಸುವ ಜನಾಂಗಗಳಲ್ಲಿ ನೀವು ಭೀಕರತೆಗೂ, ಗಾದೆಗೂ ಮತ್ತು ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.


ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.


ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ.


ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.


ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, “ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,


ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


“ನೀನು ಗ್ರಂಥ ಬರೆಯತಕ್ಕ ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತನಾಡಿದ ದಿನದಿಂದ ಇಂದಿನವರೆಗೂ ಇಸ್ರಾಯೇಲು, ಯೆಹೂದ, ಸಕಲ ಜನಾಂಗಗಳು ಇವುಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲಾ ಬರೆ.


ಅಲ್ಲದೆ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವನು ಇಂತೆನ್ನುತ್ತಾನೆ, ಬಾಬೆಲಿನ ಅರಸನು ಬಂದು ಈ ದೇಶವನ್ನು ಜನ, ಪಶುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಸುರುಳಿಯನ್ನು ಬರೆಯಿಸಿದ್ದೇಕೆ ಎಂಬುದಾಗಿ ನೀನು ಆಕ್ಷೇಪಿಸಿ ಅದನ್ನು ಸುಟ್ಟುಬಿಟ್ಟಿಯಲ್ಲ.


ಆಗ ಜನ ತುಂಬಿದ ಊರುಗಳು ಹಾಳಾಗಿ ದೇಶವು ಬೀಡುಬೀಳುವುದು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.’”


ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.


ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.


ಆಗ ಯೆಹೋವನು ನನಗೆ, “ಈ ದೇಶದ ನಿವಾಸಿಗಳೆಲ್ಲರ ಮೇಲೆ ಉತ್ತರ ದಿಕ್ಕಿನಿಂದ ಕೇಡು ಉಕ್ಕಿ ಬರುವುದು.


ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.


ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದೊಳಗೆ ನುಗ್ಗಿದಾಗ, “ಕಸ್ದೀಯರ ಮತ್ತು ಅರಾಮ್ಯರ ಸೈನ್ಯಗಳ ಮುಂದೆ ನಿಲ್ಲದೆ ಯೆರೂಸಲೇಮಿಗೆ ಹೋಗೋಣ ಬನ್ನಿ ಎಂದುಕೊಂಡು ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದೇವೆ” ಎಂದು ಹೇಳಿದರು.


ಐಗುಪ್ತವು ಅಂದವಾದ ಕಡಸಾಗಿದೆ; ತೊಣಚೆಯ ಹುಳಗಳು ಉತ್ತರ ದಿಕ್ಕಿನಿಂದ ಅದರ ಮೇಲೆ ಬಂದಿದೆ.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?


ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.


ಖಡ್ಗವು ಕೈಗೆ ಸಿಗುವಂತೆ ಮಸೆದು ಸಿದ್ಧವಾಗಿದೆ, ಘಾತಕನ ಕೈಗೆ ಈಡಾಗುವ ಹಾಗೆ ಸಾಣೆಹಿಡಿದಿದೆ, ಮಸೆದಿದೆ.


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.


ಹೀಗಿರಲು, ತಮ್ಮ ಬಲೆಗೆ ಸಿಕ್ಕಿದ್ದನ್ನು ಅವರು ನಿತ್ಯವೂ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು