ಯೆರೆಮೀಯ 26:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ, “ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಯೆರೆಮೀಯನು, “ನೀವು ಕೇಳಿದ ಮಾತುಗಳನ್ನೆಲ್ಲ, ಅಂದರೆ ಈ ದೇವಾಲಯಕ್ಕೂ ನಗರಕ್ಕೂ ವಿರುದ್ಧವಾದ ಮಾತುಗಳನ್ನು ನುಡಿಯಲು ನನ್ನನ್ನು ಕಳಿಸಿದವರು ಸರ್ವೇಶ್ವರನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆಗ ಯೆರೆಮೀಯನು ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು - ನೀವು ಕೇಳಿದ ಮಾತುಗಳನ್ನೆಲ್ಲಾ ಈ ಆಲಯಕ್ಕೂ ಈ ಪಟ್ಟಣಕ್ಕೂ ಪ್ರತಿಕೂಲವಾಗಿ ನುಡಿಯಬೇಕೆಂದು ಯೆಹೋವನು ನನ್ನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಬಗ್ಗೆ ಮತ್ತು ಈ ನಗರದ ಬಗ್ಗೆ ಹೀಗೆ ಹೇಳಲು ಯೆಹೋವನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಬಂದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ. ಅಧ್ಯಾಯವನ್ನು ನೋಡಿ |