Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ನಿಮ್ಮ ನಡತೆಯನ್ನು ಬದಲಾಯಿಸಿಕೊಂಡು, ಸತ್ಕಾರ್ಯಗಳನ್ನು ಮಾಡಲಾರಂಭಿಸಬೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಬೇಕು. ಆಗ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ನಿಮಗೆ ಕೇಡುಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:13
21 ತಿಳಿವುಗಳ ಹೋಲಿಕೆ  

ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.


ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ಆತನು ಒಂದು ವೇಳೆ ಮನಸ್ಸನ್ನು ಬದಲಾಯಿಸಿ, ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಯೆಹೋವನಿಗೆ ನೀವು ಅರ್ಪಿಸುವ ನೈವೇದ್ಯವನ್ನು ಸ್ವೀಕರಿಸಿ ಸುವರಗಳನ್ನು ದಯಪಾಲಿಸಬಹುದು.


ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.


ಒಂದು ವೇಳೆ ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನು ಕೇಳಿ ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು; ಹಿಂದಿರುಗಿದರೆ ಅವರ ಪಾಪ ಮತ್ತು ಅಪರಾಧಗಳನ್ನು ಕ್ಷಮಿಸಿಬಿಡುವೆನು” ಎಂಬ ಮಾತನ್ನು ತಿಳಿಸಿದನು.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.


ಅವರು ಒಂದು ವೇಳೆ ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಿಯಾರು; ಹಾಗೆ ಮಾಡಿದರೆ ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರಿಗೆ ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


‘ನೀವು ಈ ದೇಶದಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡವುವುದಿಲ್ಲ; ನೆಡುವೆನು, ಕೀಳುವುದಿಲ್ಲ; ನಾನು ನಿಮಗೆ ಮಾಡಿದ ಕೇಡಿಗೆ ಪಶ್ಚಾತ್ತಾಪಪಡುತ್ತೇನೆ.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.


ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು