Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಯೆಹೋವನು ಇಂತೆನ್ನುತ್ತಾನೆ, ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದು ಮಾತನ್ನೂ ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಇಂತೆನ್ನುತ್ತಾನೆ - ನೀನು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತು ಆ ಮಂದಿರದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಎಲ್ಲಾ ಊರಿನವರಿಗೆ ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು; ಒಂದು ಮಾತನ್ನೂ ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಹೀಗೆಂದನು, “ಯೆರೆಮೀಯನೇ, ಯೆಹೋವನ ಆಲಯದ ಅಂಗಳದಲ್ಲಿ ನಿಲ್ಲು, ಯೆಹೋವನ ಆಲಯದಲ್ಲಿ ಆರಾಧನೆಗೆಂದು ಬರುವ ಯೆಹೂದದ ಎಲ್ಲಾ ಜನರಿಗೆ ಈ ಸಂದೇಶವನ್ನು ತಿಳಿಸು. ನಾನು ನಿನಗೆ ತಿಳಿಸೆಂದು ಹೇಳುವ ಎಲ್ಲವನ್ನೂ ಅವರಿಗೆ ಹೇಳು. ನನ್ನ ಸಂದೇಶದ ಯಾವ ಭಾಗವನ್ನೂ ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:2
32 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಯಾವುದನ್ನೂ ಕೂಡಿಸಬಾರದು, ಅವುಗಳಿಂದ ಯಾವುದನ್ನೂ ತೆಗೆಯಬಾರದು.


ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಯೆರೆಮೀಯನು ಯೆಹೋವನ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಮೇಲೆ ಅಲ್ಲಿಂದ ಬಂದು ಯೆಹೋವನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು,


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.


ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ


ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.


ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.


ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.


ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.


ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.


“ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.


ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು.


ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.


ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.


ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದೆನು; ಇಗೋ, ನಿಮ್ಮ ಮಾತಿನಂತೆ ನಿಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸುವೆನು; ಯೆಹೋವನು ಯಾವ ಉತ್ತರವನ್ನು ದಯಪಾಲಿಸುವನೋ ಒಂದನ್ನೂ ಬಚ್ಚಿಡದೆ ನಿಮಗೆ ತಿಳಿಸುವೆನು” ಎಂದು ಉತ್ತರಕೊಟ್ಟನು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.


“ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವುದಿಲ್ಲ, ಕರೆಯುವಾಗ ಉತ್ತರಕೊಡುವುದಿಲ್ಲ.


“ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.


ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.


ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.


ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.


ಪ್ರವಾದಿಯಾದ ಯೆರೆಮೀಯನು ಯೆಹೂದ್ಯರೆಲ್ಲರ ವಿಷಯವಾಗಿ ತನಗೆ ಉಂಟಾದ ಈ ದೈವೋಕ್ತಿಯನ್ನು ಸಕಲ ಯೆಹೂದ್ಯರಿಗೂ ಸಮಸ್ತ ಯೆರೂಸಲೇಮಿನವರಿಗೂ ಸಾರಿದನು.


ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು