ಯೆರೆಮೀಯ 26:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅರಸನಾದ ಯೆಹೋಯಾಕೀಮನೂ, ಅವನ ಎಲ್ಲಾ ಪ್ರಸಿದ್ಧ ಶೂರರೂ ಮತ್ತು ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಸ್ಸು ಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅರಸ ಯೆಹೋಯಾಕೀಮನು ಮತ್ತು ಅವನ ಎಲ್ಲ ವೀರಶೂರರು ಹಾಗು ನಾಯಕರು ಆ ಊರೀಯನ ಮಾತುಗಳನ್ನು ಕೇಳಿಸಿಕೊಂಡರು. ಕೂಡಲೆ ಅರಸ ಅವನನ್ನು ಕೊಂದುಹಾಕಲು ಮನಸ್ಸುಮಾಡಿದ. ಈ ಸುದ್ದಿಯನ್ನು ಕೇಳಿದ ಊರೀಯ ಭಯಪಟ್ಟು ಓಡಿಹೋಗಿ ಈಜಿಪ್ಟನ್ನು ಸೇರಿಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅರಸನಾದ ಯೆಹೋಯಾಕೀಮನೂ ಅವನ ಎಲ್ಲಾ ಪ್ರಸಿದ್ಧ ಶೂರರೂ ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ರಾಜನಾದ ಯೆಹೋಯಾಕೀಮನೂ ಅವನ ಸೇನೆಯ ಅಧಿಕಾರಿಗಳೂ ಯೆಹೂದದ ನಾಯಕರೂ ಊರೀಯನ ಪ್ರವಾದನೆಯನ್ನು ಕೇಳಿದರು. ಅವರಿಗೆ ಕೋಪಬಂದಿತು. ರಾಜನಾದ ಯೆಹೋಯಾಕೀಮನು ಊರೀಯನನ್ನು ಕೊಲ್ಲಬಯಸಿದನು. ಆದರೆ ಯೆಹೋಯಾಕೀಮನು ತನ್ನನ್ನು ಕೊಲ್ಲಬಯಸುತ್ತಾನೆಂದು ಊರೀಯನು ಕೇಳಿದನು. ಊರೀಯನು ಭಯಪಟ್ಟು ತಪ್ಪಿಸಿಕೊಂಡು ಈಜಿಪ್ಟ್ ದೇಶಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು. ಅಧ್ಯಾಯವನ್ನು ನೋಡಿ |