Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 26:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವರು ಊರೀಯನನ್ನು ಈಜಿಪ್ಟಿನಿಂದ ಎಳೆದು ಅರಸ ಯೆಹೋಯಾಕೀಮನ ಬಳಿಗೆ ತಂದರು. ಅರಸ ಅವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಜನಸಾಮಾನ್ಯರ ಸಮಾಧಿಗಳ ನಡುವೆ ಹೂಣಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಊರೀಯನನ್ನು ಐಗುಪ್ತದಿಂದ ಎಳೆದು ಅರಸನಾದ ಯೆಹೋಯಾಕೀಮನ ಬಳಿಗೆ ತರಲು ಅವನು ಇವನನ್ನು ಕತ್ತಿಯಿಂದ ಕಡಿಸಿ ಶವವನ್ನು ಸಾಧಾರಣ ಜನರ ಗೋರಿಗಳ ನಡುವೆ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅವರು ಊರೀಯನನ್ನು ಈಜಿಪ್ಟಿನಿಂದ ತಂದರು. ಅವರು ಊರೀಯನನ್ನು ರಾಜನಾದ ಯೆಹೋಯಾಕೀಮನ ಹತ್ತಿರ ತೆಗೆದುಕೊಂಡು ಹೋದರು. ಯೆಹೋಯಾಕೀಮನು ಕತ್ತಿಯಿಂದ ಊರೀಯನ ಕೊಲೆಮಾಡಬೇಕೆಂದು ಆಜ್ಞಾಪಿಸಿದನು. ಊರೀಯನ ದೇಹವನ್ನು ಬಡವರ ಸ್ಮಶಾನದಲ್ಲಿ ಎಸೆಯಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 26:23
13 ತಿಳಿವುಗಳ ಹೋಲಿಕೆ  

ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.


ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.


ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,


ಅದು ಪ್ರಾಯದ ಸಿಂಹವಾಗಿ, ಸಿಂಹಗಳ ನಡುವೆ ತಿರುಗುತ್ತಾ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಲಾರಂಭಿಸಿತು.


ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.


ಆದರೆ ನೀವು ನನ್ನನ್ನು ಕೊಂದು ಹಾಕಿದ ಪಕ್ಷಕ್ಕೆ, ನೀವೂ, ಈ ಪಟ್ಟಣವೂ ಮತ್ತು ಇದರ ನಿವಾಸಿಗಳೂ ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ಪಾತ್ರರಾಗುವಿರಿ ಎಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ಮಾತುಗಳನ್ನೆಲ್ಲಾ ನಿಮ್ಮ ಕಿವಿಗೆ ಮುಟ್ಟಿಸುವಂತೆ ಯೆಹೋವನು ನನ್ನನ್ನು ಕಳುಹಿಸಿರುವುದು ಖಂಡಿತ” ಎಂದು ಹೇಳಿದನು.


ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು” ಎನ್ನುತ್ತಾನೆ.


ಕೆಲವರನ್ನು ಜನರು ಕಲ್ಲೆಸೆದು ಕೊಂದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಕೊಂದರು, ಕೆಲವರನ್ನು ಕತ್ತಿಯಿಂದ ಕೊಂದರು. ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.


ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು