ಯೆರೆಮೀಯ 26:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ, ‘ಈ ಆಲಯವು ಶಿಲೋವಿನ ಗತಿಗೆ ಬರುವುದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವುದು’ ಎಂದು ಏಕೆ ಹೇಳಿದೆ” ಎಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀನು ಯೆಹೋವನ ಹೆಸರೆತ್ತಿ ಪ್ರವಾದಿಸುತ್ತಾ - ಈ ಆಲಯವು ಶಿಲೋವಿನ ಗತಿಗೆ ಬರುವದು, ಈ ಪಟ್ಟಣವು ಒಕ್ಕಲಿಲ್ಲದೆ ಹಾಳುಬೀಳುವದು ಎಂದು ಏಕೆ ನುಡಿದೆ ಅಂದರು. ಆಗ ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನ ಸುತ್ತಲು ಸುತ್ತಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನ ಹೆಸರಿನಲ್ಲಿ ಹಾಗೆ ಪ್ರವಾದಿಸಲು ನಿನಗೆ ಹೇಗೆ ಧೈರ್ಯ ಬಂದಿತು? ಶಿಲೋವಿನಂತೆ ಯೆಹೋವನ ಈ ಆಲಯವು ಹಾಳಾಗುವದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು? ಜೆರುಸಲೇಮು ಜನರಿಲ್ಲದ ಒಂದು ಮರುಭೂಮಿಯಾಗುವುದೆಂದು ಹೇಳಲು ನಿನಗೆ ಹೇಗೆ ಧೈರ್ಯ ಬಂದಿತು?” ಎಂದು ಕೇಳಿದರು. ಯೆಹೋವನ ಆಲಯದಲ್ಲಿ ಎಲ್ಲಾ ಜನರು ಯೆರೆಮೀಯನನ್ನು ಮುತ್ತಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು. ಅಧ್ಯಾಯವನ್ನು ನೋಡಿ |