Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೆ ನೆಲೆಗೊಳಿಸುವೆನು; ಅವರು ಅಲ್ಲೆ ಉತ್ತು, ಬಿತ್ತು ವಾಸಮಾಡುವರು. ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವದೋ ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಗೆಯ್ದು ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “‘ಆದರೆ ಬಾಬಿಲೋನ್ ರಾಜನ ನೊಗಕ್ಕೆ ತಮ್ಮ ಹೆಗಲನ್ನು ಕೊಡುವ ಮತ್ತು ಅವನ ಆಜ್ಞೆಯನ್ನು ಪಾಲಿಸುವ ಜನಾಂಗಗಳು ಬದುಕುವವು. ಆ ಜನಾಂಗಗಳವರು ತಮ್ಮ ದೇಶದಲ್ಲಿಯೇ ಇದ್ದುಕೊಂಡು ಬಾಬಿಲೋನಿನ ರಾಜನ ಸೇವೆ ಮಾಡುವ ಅವಕಾಶವನ್ನು ಮಾಡಿಕೊಡುತ್ತೇನೆ. ಆ ಜನಾಂಗಗಳ ಜನರು ತಮ್ಮ ದೇಶದಲ್ಲಿಯೇ ವ್ಯವಸಾಯ ಮಾಡಿಕೊಂಡಿರುವರು.’” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.” ’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:11
8 ತಿಳಿವುಗಳ ಹೋಲಿಕೆ  

ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.


“ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,


ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.


ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.


ಇದಲ್ಲದೆ ನಾನು ಆ ಎಲ್ಲಾ ಮಾತುಗಳನ್ನು ಅನುಸರಿಸಿ ಯೆಹೂದದ ಅರಸನಾದ ಚಿದ್ಕೀಯನಿಗೂ ಹೀಗೆ ನುಡಿದೆನು, “ಬಾಬೆಲಿನ ಅರಸನ ನೊಗಕ್ಕೆ ಹೆಗಲುಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಿರಿ, ಆಗ ಬದುಕುವಿರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “‘ಜನಾಂಗಗಳಲ್ಲಿ ಚದುರಿ ಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲಾ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ಆ ಇಸ್ರಾಯೇಲ್ ವಂಶದವರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ಸ್ವದೇಶದಲ್ಲಿ ವಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು