ಯೆರೆಮೀಯ 27:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ. ನೀವೂ, ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವುದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವುದು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ; ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಅವರು ಸುಳ್ಳು ಪ್ರವಾದನೆಗಳನ್ನು ಮಾಡುತ್ತಿದ್ದಾರೆ ಮತ್ತು ಅದು ನನ್ನ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನ್ನು ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನ್ನು ಮಾಡುತ್ತಿರುವ ಆ ಪ್ರವಾದಿಗಳು ಸಹ ಸಾಯುತ್ತಾರೆ’” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.” ಅಧ್ಯಾಯವನ್ನು ನೋಡಿ |