ಯೆರೆಮೀಯ 27:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಳಿಕ ನಾನು ಯಾಜಕರಿಗೂ ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಸರ್ವೇಶ್ವರನ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ನಾನು ಯಾಜಕರಿಗೂ ಈ ಸಕಲ ಜನರಿಗೂ ಹೀಗೆ ನುಡಿದೆನು - ಯೆಹೋವನು ಇಂತೆನ್ನುತ್ತಾನೆ - ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು ಎಂಬದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ನಾನು (ಯೆರೆಮೀಯನು) ಯಾಜಕರಿಗೂ ಆ ಸಮಸ್ತ ಜನರಿಗೂ ಹೀಗೆ ಹೇಳಿದೆ: “ಯೆಹೋವನು ಹೇಳುತ್ತಾನೆ. ಆ ಸುಳ್ಳುಪ್ರವಾದಿಗಳು, ‘ಬಾಬಿಲೋನಿನವರು ಯೆಹೋವನ ಆಲಯದಿಂದ ಅನೇಕ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಆ ವಸ್ತುಗಳನ್ನು ಬೇಗನೆ ಹಿಂದಕ್ಕೆ ತರಲಾಗುವುದು’ ಎಂದು ಹೇಳುತ್ತಿದ್ದಾರೆ. ಆ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ. ಏಕೆಂದರೆ ಅವರು ನಿಮಗೆ ಸುಳ್ಳುಪ್ರವಾದನೆ ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಬಳಿಕ ನಾನು ಯಾಜಕರಿಗೂ, ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಯೆಹೋವ ದೇವರ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು,’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅಧ್ಯಾಯವನ್ನು ನೋಡಿ |