ಯೆರೆಮೀಯ 27:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ‘ಅವು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವ ತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವು ಬಾಬೆಲಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಉದ್ಧರಿಸುವ ದಿನದ ತನಕ ಅಲ್ಲೇ ಇರುವವು; ಆಗ ನಾನು ಅವುಗಳನ್ನು ಪುನಃ ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ವಸ್ತುಗಳು ಬಾಬಿಲೋನಿಗೆ ಒಯ್ಯಲ್ಪಟ್ಟು ನಾನು ಅವುಗಳನ್ನು ಅಲ್ಲಿಂದ ತರುವ ದಿವಸಗಳವರೆಗೆ ಅಲ್ಲಿಯೇ ಇರುವವು, ಆಮೇಲೆ ನಾನು ಆ ವಸ್ತುಗಳನ್ನು ತರುವೆನು. ನಾನು ಆ ವಸ್ತುಗಳನ್ನು ಮತ್ತೆ ಈ ಸ್ಥಳದಲ್ಲಿ ಇಡುವೆನು.’” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.” ಅಧ್ಯಾಯವನ್ನು ನೋಡಿ |
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.