ಯೆರೆಮೀಯ 27:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ತಮ್ಮ ತಮ್ಮ ರಾಜರುಗಳಿಗೆ ಅದನ್ನು ತಿಳಿಸುವಂತೆ ಆಜ್ಞಾಪಿಸು. ಆ ಸಮಾಚಾರವೇನೆಂದರೆ - ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತುಗಳಿವು; ನಿಮ್ಮ ರಾಜರುಗಳು ಅರಿಯಬೇಕಾದ ವಿಷಯವಿದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಆ ರಾಯಭಾರಿಗಳಿಗೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈ ಸಂದೇಶವನ್ನು ತಮ್ಮ ಒಡೆಯರಿಗೆ ತಿಳಿಸಬೇಕೆಂದು ಆ ರಾಯಭಾರಿಗಳಿಗೆ ಹೇಳು. ಅವರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರು ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ ಎಂದು ನಿಮ್ಮ ಒಡೆಯರಿಗೆ ತಿಳಿಸಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ‘ಇಸ್ರಾಯೇಲರ ದೇವರೂ ಸೇನಾಧೀಶ್ವರರೂ ಆದ ಯೆಹೋವ ದೇವರು ನಿಮ್ಮ ಯಜಮಾನರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾರೆ ಎಂಬುದಾಗಿ ಹೇಳಿ ಅವರು, “ತಮ್ಮ ತಮ್ಮ ಯಜಮಾನರಿಗೆ ಹೀಗೆ ಹೇಳಬೇಕು: ಅಧ್ಯಾಯವನ್ನು ನೋಡಿ |