Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂವಿುಯನ್ನೂ ಅದರ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಭೂಮಿಯನ್ನೂ ಮತ್ತು ಅದರ ಮೇಲಿರುವ ಎಲ್ಲಾ ಜನರನ್ನೂ ಸೃಷ್ಟಿಸಿದೆ. ನಾನು ಭೂಮಿಯ ಮೇಲಿನ ಎಲ್ಲಾ ಪ್ರಾಣಿಗಳನ್ನು ಸೃಷ್ಟಿಸಿದೆ. ನಾನು ಇದನ್ನು ನನ್ನ ಮಹಾಶಕ್ತಿಯಿಂದಲೂ ಬಲವಾದ ತೋಳುಗಳಿಂದಲೂ ಸೃಷ್ಟಿಸಿದೆ. ನಾನು ಆ ಭೂಮಿಯನ್ನು ನನ್ನ ಮನಸ್ಸಿಗೆ ಬಂದವರಿಗೆ ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:5
54 ತಿಳಿವುಗಳ ಹೋಲಿಕೆ  

ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ವಿಸ್ತರಿಸಿದ್ದಾನೆ.


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.


ಭೂಲೋಕವನ್ನು ಉಂಟುಮಾಡಿ ಅದರಲ್ಲಿನ ಮನುಷ್ಯರನ್ನು ಸೃಷ್ಟಿಸಿದವನು ನಾನೇ. ನನ್ನ ಕೈಗಳೇ ಆಕಾಶಮಂಡಲವನ್ನು ಹರಡಿದವು, ನಕ್ಷತ್ರಸೈನ್ಯಕ್ಕೆ ಅಪ್ಪಣೆಕೊಟ್ಟವನೂ ನಾನೇ.


ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.


ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,


ಆದರೆ ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ಮಗನ ಮುಖಾಂತರ ಮಾತನಾಡಿದ್ದಾನೆ. ಆತನನ್ನು ಎಲ್ಲದಕ್ಕೂ ಬಾಧ್ಯಸ್ಥನನ್ನಾಗಿ ನೇಮಿಸಿದನು ಮತ್ತು ಆತನ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದನು.


“ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ, ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವುದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;


“ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಆಕಾಶಮಂಡಲವನ್ನು ಹರಡಿ, ಭೂಲೋಕವನ್ನು ಸ್ಥಾಪಿಸಿದ ನಿನ್ನ ಸೃಷ್ಟಿಕರ್ತನಾದ ಯೆಹೋವನನ್ನು ಮರೆತುಬಿಟ್ಟೆಯಾ? ನಾಶಮಾಡಬೇಕೆಂದು ಬಾಣವನ್ನು ಹೂಡುವ ಹಿಂಸಕನ ಕ್ರೋಧಕ್ಕೆ ದಿನವೆಲ್ಲಾ ಎಡೆಬಿಡದೆ ಅಂಜುತ್ತೀಯಾ? ಆ ಹಿಂಸಕನ ಕ್ರೋಧವು ಎಲ್ಲಿ ಇದೆ?


ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು.


ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ.


ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.


ನೀವು ಕೈಹಾಕಿದ ಎಲ್ಲಾ ಕೆಲಸಗಳನ್ನೂ ನಿಮ್ಮ ದೇವರಾದ ಯೆಹೋವನು ಸಫಲಪಡಿಸಿದ್ದಾನಲ್ಲಾ. ಈ ದೊಡ್ಡ ಅರಣ್ಯದಲ್ಲಿ ನೀವು ಸಂಚರಿಸುತ್ತಿರುವಾಗೆಲ್ಲಾ ಆತನು ನಿಮ್ಮನ್ನು ಪರಾಂಬರಿಸುತ್ತಾ ಬಂದನು. ಈ ನಲ್ವತ್ತು ವರ್ಷ ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಇದ್ದುದರಿಂದ ನಿಮಗೆ ಏನೂ ಕೊರತೆಯಾಗಲಿಲ್ಲ’” ಎಂದು ಹೇಳಿದನು.


ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದಿ; ಗಗನಮಂಡಲವು ನಿನ್ನ ಕೈಕೆಲಸವಾಗಿದೆ.


ಹೇಗೆಂದರೆ, “ಪರಾತ್ಪರನಾದ ದೇವರು ಜನಾಂಗಗಳನ್ನು ಬೇರೆ ಬೇರೆ ಮಾಡಿ ಅವರವರಿಗೆ ಸ್ವದೇಶಗಳನ್ನು ನೇಮಿಸಿಕೊಟ್ಟಾಗ ಇಸ್ರಾಯೇಲರ ಸಂಖ್ಯೆಗೆ ತಕ್ಕಂತೆ ಆಯಾ ಜನಾಂಗಕ್ಕೆ ಒಂದೊಂದು ಪ್ರದೇಶವನ್ನು ಗೊತ್ತು ಮಾಡಿದನು.


ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.


“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.


ಯೆಹೋವನೊಬ್ಬನೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದೆಲ್ಲಾ ನಿಮಗೆ ಮಾತ್ರ ತೋರಿಸಿದ್ದಾನೆ.


ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.


ನೀವು ಮಕ್ಕಳನ್ನೂ ಮತ್ತು ಮೊಮ್ಮಕ್ಕಳನ್ನೂ ಪಡೆದು ಬಹುಕಾಲ ಆ ದೇಶದಲ್ಲಿದ್ದ ಮೇಲೆ ದ್ರೋಹಿಗಳಾಗಿ ಯಾವ ವಿಗ್ರಹವನ್ನಾದರೂ ಮಾಡಿಕೊಂಡು, ನಿಮ್ಮ ದೇವರಾದ ಯೆಹೋವನ ದೃಷ್ಟಿಗೆ ಕೆಟ್ಟದ್ದನ್ನು ನಡಿಸಿ,


ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ,


ಅವರು ಬಲಿಷ್ಠರೂ, ಬಹುಜನರೂ ಮತ್ತು ಅನಾಕ್ಯರಂತೆ ಎತ್ತರವಾದ ಪುರುಷರೂ ಆಗಿದ್ದರು.


ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”


ಆಗ ಯೆಹೋವನು ನನಗೆ, “ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸ್ವತ್ತನ್ನು ಕೊಡುವುದಿಲ್ಲ” ಎಂದು ಆಜ್ಞಾಪಿಸಿದನು.


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.


ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.


ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.


ನೀನು ಆ ರಾಯಭಾರಿಗಳಿಗೆ, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ನಿಮ್ಮ ಒಡೆಯರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾನೆ ಎಂಬುದಾಗಿ ಹೇಳಿ ಅವರು ತಮ್ಮ ತಮ್ಮ ಒಡೆಯರಿಗೆ ತಿಳಿಸಬೇಕಾದ ಈ ಮಾತುಗಳನ್ನು ಅವರಿಗೆ ಆಜ್ಞಾಪಿಸು.’


ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ,


ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು.


ನರಜಾತಿಯವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ, ಭೂಜಂತುಗಳನ್ನೂ ನಿನ್ನ ಕೈಗೆ ಒಪ್ಪಿಸಿ ನೀನು ಅವುಗಳನ್ನೆಲ್ಲಾ ಆಳುವಂತೆ ಮಾಡಿದ್ದಾನೆ; ನೀನೇ ಆ ಬಂಗಾರದ ತಲೆ.


ವೃಕ್ಷವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿರಿ, ಎಲೆಗಳನ್ನು ಉದುರಿಸಿರಿ, ಹಣ್ಣುಗಳನ್ನು ಚೆಲ್ಲಿರಿ; ಮೃಗಗಳು ನೆರಳನ್ನು ಬಿಟ್ಟುಬಿಡಲಿ, ಪಕ್ಷಿಗಳು ರೆಂಬೆಗಳನ್ನು ತೊರೆದು ಹೋಗಲಿ!


ಆ ವೃಕ್ಷವು ನೀನೇ; ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳ್ವಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು