ಯೆರೆಮೀಯ 27:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೆ ಕೊಡಬಲ್ಲೆನು; ಈಗ ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ; ಅವನ ಸೇವೆಗಾಗಿ ಭೂಜಂತುಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈಗ ನಾನು ನಿಮ್ಮೆಲ್ಲ ದೇಶಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸಿದ್ದೇನೆ. ಅವನು ನನ್ನ ಸೇವಕನಾಗಿದ್ದಾನೆ. ಕಾಡುಪ್ರಾಣಿಗಳು ಸಹ ಅವನ ಆಜ್ಞೆಯನ್ನು ಪಾಲಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |
ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.