Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 27:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯಾವ ಜನಾಂಗ, ಯಾವ ರಾಜ್ಯ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೋ ಆ ಜನಾಂಗವನ್ನು ನಾನು ಖಡ್ಗ ಕ್ಷಾಮವ್ಯಾಧಿಗಳಿಂದ ದಂಡಿಸುತ್ತಾ ಬಂದು ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ “ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 27:8
15 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ನಾನು ಅವರಿಗೂ ಅವರ ಪೂರ್ವಿಕರಿಗೂ ಅನುಗ್ರಹಿಸಿದ ದೇಶದೊಳಗಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು” ಎಂದು ಹೇಳುತ್ತಾನೆ.


ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು ಇವರಿಗೂ ಇವರ ಸೈನಿಕರಿಗೂ, “ಕಸ್ದೀಯರಿಗೆ ಅಧೀನರಾಗಿರಲಿಕ್ಕೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಅಧೀನರಾಗಿ ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವುದು.


ಯಾವ ಜನಾಂಗವು ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ, ಆ ಜನಾಂಗದವರನ್ನು ನಾನು ಅವರ ದೇಶದಲ್ಲಿ ನೆಲೆಗೊಳಿಸುವೆನು; ಅವರು ಅಲ್ಲಿ ಭೂಮಿಯನ್ನು ವ್ಯವಸಾಯಮಾಡಿ ವಾಸಿಸುವರು. ಯೆಹೋವನೇ ಇದನ್ನು ನುಡಿದಿದ್ದಾನೆ.”


ನೀನೂ ನಿನ್ನ ಜನರೂ ಖಡ್ಗ ಕ್ಷಾಮ ಮತ್ತು ವ್ಯಾಧಿಗಳಿಂದ ಏಕೆ ಸಾಯಬೇಕು? ಬಾಬೆಲಿನ ಅರಸನ ಅಡಿಯಾಳಾಗಲು ಒಪ್ಪದ ಜನಾಂಗಕ್ಕೆ ಈ ಗತಿಯಾಗುವುದೆಂದು ಯೆಹೋವನು ನುಡಿದಿದ್ದಾನಷ್ಟೆ.


“‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”


ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.


“ಆಹಾ, ನಾನು ಅವರ ಮೇಲೆ ಖಡ್ಗ, ಕ್ಷಾಮ ಮತ್ತು ವ್ಯಾಧಿಗಳನ್ನು ಬರಮಾಡಿ ಯಾರೂ ತಿನ್ನದ ಹಾಗೆ ಕೆಟ್ಟು ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಅವರನ್ನು ತರುವೆನು.


ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ, ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆಯೂ, ನಾನು ಅವರನ್ನು ಅಟ್ಟಿಬಿಟ್ಟಿರುವ ಸಕಲ ಜನಾಂಗಗಳಲ್ಲಿ ಶಾಪ, ಪರಿಹಾಸ್ಯ, ದೂಷಣೆ, ಇವುಗಳಿಗೆ ಗುರಿಯಾಗುವಂತೆಯೂ ಮಾಡುವೆನು.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು