ಯೆರೆಮೀಯ 27:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ಬಾಬೆಲಿನ ಅರಸನ ಅಡಿಯಾಳಾಗುವದಿಲ್ಲ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದ್ದರಿಂದ ನಿಮ್ಮ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಮಾಟಮಾಂತ್ರಗಳನ್ನು ಬಳಸಿ ಭವಿಷ್ಯವನ್ನು ಹೇಳುವವರ ಮಾತುಗಳನ್ನು ಕೇಳಬೇಡಿರಿ. ಕನಸುಗಳ ಗೂಢಾರ್ಥವನ್ನು ಹೇಳುವೆವೆಂಬ ಜನರ ಮಾತುಗಳನ್ನು ಕೇಳಬೇಡಿರಿ. ಸತ್ತವರೊಡನೆ ಮಾತನಾಡುವ ಅಥವಾ ಮಾಟಮಂತ್ರ ಮಾಡುವ ಜನರ ಮಾತುಗಳನ್ನು ಕೇಳಬೇಡಿರಿ. ಅವರೆಲ್ಲರೂ, “ನೀವು ಬಾಬಿಲೋನಿನ ರಾಜನಿಗೆ ಗುಲಾಮರಾಗುವದಿಲ್ಲ” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.