ಯೆರೆಮೀಯ 28:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದುಹಾಕುವೆನು ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟು ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’” ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನೆಂದರೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇದೇ ಪ್ರಕಾರ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು,’ ” ಎಂದನು. ಆಗ ಪ್ರವಾದಿಯಾದ ಯೆರೆಮೀಯನು ತನ್ನ ಮಾರ್ಗವಾಗಿ ಹೊರಟುಹೋದನು. ಅಧ್ಯಾಯವನ್ನು ನೋಡಿ |