Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ಪ್ರವಾದಿ ಹನನ್ಯನು ಪ್ರವಾದಿ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು, ಮುರಿದುಹಾಕಿದ ಮೇಲೆ ಸರ್ವೇಶ್ವರ ಯೆರೆಮೀಯನಿಗೆ ಹೀಗೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೆರೆಮೀಯನಿಗೆ ಯೆಹೋವನ ಸಂದೇಶ ಬಂದಿತು. ಹನನ್ಯನು ಯೆರೆಮೀಯನ ಕತ್ತಿನಿಂದ ನೊಗವನ್ನು ತೆಗೆದುಕೊಂಡು ಮುರಿದುಹಾಕಿದ ಮೇಲೆ ಈ ಸಂದೇಶ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ, ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:12
6 ತಿಳಿವುಗಳ ಹೋಲಿಕೆ  

ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.


ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಯೆರೂಸಲೇಮ್ ಹಾಳು ಬಿದ್ದಿರಬೇಕಾದ ಪೂರ್ಣಕಾಲದ ವರ್ಷಗಳ ಸಂಖ್ಯೆ ಎಪ್ಪತ್ತೆಂದು ತಿಳಿದೆನು.


ಅನಂತರ ಯೆರೆಮೀಯನಿಗೆ ಯೆಹೋವನು ಈ ಮಾತುಗಳನ್ನು ತಿಳಿಸಿದನು.


ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನೆಂದರೆ,


ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲು ಯೆಹೋವನಿಂದ ಅಪ್ಪಣೆಯಾಯಿತು.


“ಇದೇ ಯೆಹೋವನ ನುಡಿ, ನೀನು ಕಣ್ಣಿಗಳನ್ನೂ ಮತ್ತು ನೊಗಗಳನ್ನು ಮಾಡಿ ನಿನ್ನ ಹೆಗಲಿಗೆ ಹಾಕಿಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು