ಯೆರೆಮೀಯ 28:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಏಕಂದರೆ ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾವು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಸೇವಿಸೇ ಸೇವಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ ಎಂದು ಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೇಳುವುದೇನೆಂದರೆ, ನಾನು ಕಬ್ಬಿಣದ ನೊಗವನ್ನು ಈ ಎಲ್ಲಾ ಜನಾಂಗಗಳ ಹೆಗಲಿನ ಮೇಲೆ ಹೊರಿಸುವೆನು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನ ಸೇವೆಯನ್ನು ಮಾಡುವಂತೆ ಮಾಡುತ್ತೇನೆ. ಅವರು ಅವನಿಗೆ ಗುಲಾಮರಾಗಿರುವರು. ನಾನು ನೆಬೂಕದ್ನೆಚ್ಚರನಿಗೆ ಕಾಡುಪ್ರಾಣಿಗಳ ಮೇಲೂ ಅಧಿಕಾರವನ್ನು ದಯಪಾಲಿಸುವೆನು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ” ಅಧ್ಯಾಯವನ್ನು ನೋಡಿ |