Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರ್ಷ ಏಳನೆಯ ತಿಂಗಳಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಂತೆಯೇ ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರುಷ ಏಳನೆಯ ತಿಂಗಳಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹಾಗೆಯೇ ಪ್ರವಾದಿಯಾದ ಹನನ್ಯನು ಅದೇ ವರ್ಷದಲ್ಲಿ ಏಳನೆಯ ತಿಂಗಳಲ್ಲಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:17
8 ತಿಳಿವುಗಳ ಹೋಲಿಕೆ  

ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,


ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.


ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.


ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು