ಯೆರೆಮೀಯ 28:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಬಾಬಿಲೋನಿಗೆ ಸೆರೆಹೋದ ಎಲ್ಲ ಯೆಹೂದ್ಯರನ್ನು ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬೆಲಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರಿಗಿ ಬರಮಾಡುವೆನು. ಬಾಬೆಲಿನ ಅರಸನು [ನಿಮಗೆ] ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ಯೆಹೂದದ ರಾಜನಾದ ಯೆಹೋಯಾಕೀನನನ್ನು ಇಲ್ಲಿಗೆ ಕರೆದುಕೊಂಡು ಬರುತ್ತೇನೆ. ಯೆಹೋಯಾಕೀನನು ಯೆಹೋಯಾಕೀಮನ ಮಗನು. ನೆಬೂಕದ್ನೆಚ್ಚರನು ಬಾಬಿಲೋನಿಗೆ ತೆಗೆದುಕೊಂಡು ಹೋದ ಎಲ್ಲಾ ಯೆಹೂದ್ಯರನ್ನು ನಾನು ಮತ್ತೆ ಕರೆದುಕೊಂಡು ಬರುತ್ತೇನೆ. ಬಾಬಿಲೋನಿನ ರಾಜನು ಯೆಹೂದದ ಜನರ ಮೇಲೆ ಹೇರಿದ ನೊಗವನ್ನು ನಾನು ಮುರಿದುಹಾಕುತ್ತೇನೆ.’” ಇದು ಯೆಹೋವನ ಸಂದೇಶ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.” ಅಧ್ಯಾಯವನ್ನು ನೋಡಿ |