Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 28:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ಆಪತ್ತು-ವಿಪತ್ತು, ಕಾಯಿಲೆ-ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹನನ್ಯನೇ, ನಾನು ಮತ್ತು ನೀನು ಪ್ರವಾದಿಗಳಾಗುವದಕ್ಕಿಂತ ಬಹಳ ಮುಂಚೆ ಪ್ರವಾದಿಗಳು ಇದ್ದರು. ಯುದ್ಧ, ಹಸಿವು ಮತ್ತು ಭಯಂಕರವಾದ ವ್ಯಾಧಿಗಳು ಅನೇಕ ದೇಶಗಳಿಗೆ ಮತ್ತು ದೊಡ್ಡದೊಡ್ಡ ರಾಜ್ಯಗಳಿಗೆ ಬರುತ್ತವೆ ಎಂದು ಅವರು ಪ್ರವಾದಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 28:8
25 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.


ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,


ಆಮೋಸನು ಹೀಗೆ ಪ್ರಕಟಿಸಿದನು, “ಯೆಹೋವನು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ಧ್ವನಿಗೈಯುವನು. ಆಗ ಕುರುಬರ ಹುಲ್ಲುಗಾವಲುಗಳು ಬಾಡಿಹೋಗುವವು. ಕರ್ಮೆಲ್ ಬೆಟ್ಟದ ತುದಿಯು ಒಣಗಿಹೋಗುವವು.”


ಅವರ ಬಿಲ್ಲುಗಳು ಯುವಕರನ್ನು ಚೂರುಚೂರು ಮಾಡುವವು. ಇವರು ಹಸುಳೆಗಳನ್ನು ಕನಿಕರಿಸುವುದಿಲ್ಲ. ಇವರು ಮಕ್ಕಳನ್ನು ಉಳಿಸುವುದಿಲ್ಲ.


ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.


ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡು ಬಂದ ದೈವೋಕ್ತಿ.


ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಇಸ್ರಾಯೇಲಿನ ಅರಸನೂ, ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮೊದಲೇ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕೇಳಿಬಂದ ದೈವೋಕ್ತಿಗಳು.


ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು