Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜೆರುಸಲೇಮಿನಿಂದ ಬಾಬಿಲೋನಿಗೆ ನೆಬೂಕದ್ನೆಚ್ಚರನು ಸೆರೆ ಒಯ್ದಿದ್ದ ಹಿರಿಯರಿಗೂ ಯಾಜಕರಿಗೂ ಪ್ರವಾದಿಗಳಿಗೂ ಸಕಲ ಜನರಿಗೂ ಪ್ರವಾದಿ ಯೆರೆಮೀಯನು ಜೆರುಸಲೇಮಿನಿಂದ ಒಂದು ಪತ್ರವನ್ನು ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇವಿುನ ಸರದಾರರು, ಶಿಲ್ಪಿಗಳು, ಕಮ್ಮಾರರು, ಇವರು ಯೆರೂಸಲೇವಿುನಿಂದ ತೊಲಗಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆರೆಮೀಯನು ಬಾಬಿಲೋನಿನಲ್ಲಿದ್ದ ಯೆಹೂದ್ಯ ಸೆರೆಯಾಳುಗಳಿಗೆ, ಅಂದರೆ ಹಿರಿಯನಾಯಕರಿಗೆ, ಯಾಜಕರಿಗೆ, ಪ್ರವಾದಿಗಳಿಗೆ ಮತ್ತು ಇನ್ನುಳಿದ ಸಮಸ್ತ ಜನರಿಗೆ ಪತ್ರವನ್ನು ಕಳುಹಿಸಿದನು. ಇವರನ್ನು ನೆಬೂಕದ್ನೆಚ್ಚರನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆಯಾಳುಗಳಾಗಿ ಕೊಂಡೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರವಾದಿಯಾದ ಯೆರೆಮೀಯನು ಸೆರೆಯಲ್ಲಿರುವ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಒಯ್ದ ಜನರೆಲ್ಲರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:1
16 ತಿಳಿವುಗಳ ಹೋಲಿಕೆ  

ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು:


ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;


ನಾನು ಬರೆದ ಪತ್ರದಿಂದ ನಿಮಗೆ ದುಃಖವಾಗಿದ್ದರೂ ನನಗೆ ವಿಷಾದವಿಲ್ಲ, ಅದು ನಿಮ್ಮನ್ನು ಸ್ವಲ್ಪ ಸಮಯ ದುಃಖಪಡಿಸಿತೆಂದು ನಾನು ಮೊದಲು ಪಶ್ಚಾತ್ತಾಪ ಪಟ್ಟಿದ್ದರೂ ಈಗ ಸಂತೋಷಪಡುತ್ತೇನೆ.


“‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”


ಇಗೋ ನೋಡಿರಿ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ.


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.


ಅದರಂತೆ ಪ್ರವಾದಿಯಾದ ಹನನ್ಯನು ಅದೇ ವರ್ಷ ಏಳನೆಯ ತಿಂಗಳಲ್ಲಿ ಸತ್ತನು.


ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.


ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ.


ಅವನು ಸೆರಾಯನಿಗೆ ಹೀಗೆ ಹೇಳಿದನು, “ನೋಡು, ನೀನು ಬಾಬಿಲೋನಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ ಓದಿ ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು