ಯೆರೆಮೀಯ 29:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ, ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲ ನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ, ದಾವೀದನ ಸಿಂಹಾಸನವನ್ನು ಅಲಂಕರಿಸಿದ್ದ ಅರಸನ ವಿಷಯವಾಗಿ ಹಾಗೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸೋದರರೂ ಈ ನಗರದ ನಿವಾಸಿಗಳೂ ಆದವರ ವಿಷಯವಾಗಿ ಹೇಳಿರುವುದನ್ನು ಕೇಳಿ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಸೇನಾಧೀಶ್ವರನಾದ ಯೆಹೋವನು ದಾವೀದನ ಸಿಂಹಾಸನಾರೂಢನಾದ ಅರಸನ ವಿಷಯವಾಗಿಯೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸಹೋದರರಾದ ಈ ಪಟ್ಟಣದ ಸಕಲನಿವಾಸಿಗಳ ವಿಷಯವಾಗಿಯೂ ಇಂತೆನ್ನುತ್ತಾನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಾಬಿಲೋನಿಗೆ ತೆಗೆದುಕೊಂಡು ಹೋಗದ ನಿಮ್ಮ ಆಪ್ತರ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ. ಈಗ ದಾವೀದನ ಸಿಂಹಾಸನಾರೂಢನಾದ ರಾಜನ ವಿಷಯವಾಗಿಯೂ ಇನ್ನೂ ಜೆರುಸಲೇಮ್ ನಗರದಲ್ಲಿಯೇ ಇರುವ ಜನರ ವಿಷಯವಾಗಿಯೂ ಹೇಳುತ್ತಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ, ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ ಅಧ್ಯಾಯವನ್ನು ನೋಡಿ |