ಯೆರೆಮೀಯ 29:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
23 ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.
23 ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”
23 ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡಿಸಿ ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿ ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ ಎಂಬದೇ.
23 ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.
23 ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.
ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.
ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,
“ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.
ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?
ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು.
ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.
ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,
ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.