Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಯೆರೂಸಲೇಮಿನಲ್ಲಿರುವ ಎಲ್ಲಾ, ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಮತ್ತು ಸಮಸ್ತ ಯಾಜಕರಿಗೂ ನಿನ್ನ ಹೆಸರಿಗೆ ಕಳುಹಿಸಿದ ಕಾಗದದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ - ‘ನೀನು ಜೆರುಸಲೇಮಿನಲ್ಲಿರುವ ಜನರೆಲ್ಲರಿಗೂ ಯಾಜಕನಾದ ಮಾಸೇಯನ ಮಗ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನಲ್ಲೆ ಪತ್ರ ಬರೆದು ಕಳಿಸಿರುವೆ. ಚೆಫನ್ಯನಿಗೆ ನೀನು ಹೀಗೆಂದು ಬರೆದಿರುವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಯೆರೂಸಲೇವಿುನಲ್ಲಿರುವ ಎಲ್ಲಾ ಜನರಿಗೂ ಯಾಜಕನಾದ ಮಾಸೇಯನ ಮಗನಾಗಿರುವ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನ ಮೇಲೆ ಕಳುಹಿಸಿದ ಕಾಗದದಲ್ಲಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: “ಶೆಮಾಯನೇ, ಜೆರುಸಲೇಮಿನಲ್ಲಿರುವ ಎಲ್ಲಾ ಜನರಿಗೆ ನೀನು ಪತ್ರವನ್ನು ಕಳುಹಿಸಿದೆ. ನೀನು ಮಾಸೇಯನ ಮಗನಾಗಿರುವ ಯಾಜಕನಾದ ಚೆಫನ್ಯನಿಗೂ ಮತ್ತು ಎಲ್ಲಾ ಯಾಜಕರಿಗೂ ಪತ್ರಗಳನ್ನು ಕಳುಹಿಸಿದೆ. ಆ ಪತ್ರಗಳನ್ನು ಯೆಹೋವನ ಆದೇಶದ ಪ್ರಕಾರ ಕಳುಹಿಸದೆ, ನಿನ್ನ ಹೆಸರಿನಿಂದ ಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ, ಮಾಸೇಯನ ಮಗ ಯಾಜಕನಾದ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದೆಯಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:25
16 ತಿಳಿವುಗಳ ಹೋಲಿಕೆ  

ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ತರಗತಿಯ ಯಾಜಕನಾದ ಚೆಫನ್ಯನು, ಮೂರು ಜನ ದ್ವಾರಪಾಲಕರು,


ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.


ಯಾಜಕನಾದ ಚೆಫನ್ಯನು ಈ ಕಾಗದವನ್ನು ಪ್ರವಾದಿಯಾದ ಯೆರೆಮೀಯನ ಮುಂದೆ ಓದಿದನು.


ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.


ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.


ಅದೇ ಸಮಯದಲ್ಲಿ ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರಗಳು ನಡೆಯುತ್ತಿದ್ದವು.


ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.


ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.


ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.


ಅಷ್ಟರಲ್ಲಿ ಐಗುಪ್ತದ ಅರಸನೂ ಮತ್ತು ಕೂಷಿನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡಲು ಹೊರಟಿದ್ದಾನೆ ಎಂಬ ಸುದ್ದಿಯನ್ನು ಸನ್ಹೇರೀಬನು ಕೇಳಿದಾಗ, ಯೆಹೂದದ ಅರಸನಾದ ಹಿಜ್ಕೀಯನ ಬಳಿಗೆ ಪುನಃ ದೂತರನ್ನು ಕಳುಹಿಸಿ,


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು