ಯೆರೆಮೀಯ 29:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇವಿುಸಿ ಯಾವಯಾವನು ಮೈದುಂಬಿ ಪ್ರವಾದಿಯಾಗಿ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಶೆಮಾಯನೇ, ನೀನು ಚೆಫನ್ಯನಿಗೆ ಬರೆದ ಪತ್ರದಲ್ಲಿ ಹೀಗೆ ಹೇಳಿರುವೆ: ‘ಚೆಫನ್ಯನೇ, ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿದ್ದಾನೆ. ನೀನು ಯೆಹೋವನ ಆಲಯದ ಮೇಲ್ವಿಚಾರಕನಾಗಿರುವೆ. ಹುಚ್ಚನಂತೆ ವರ್ತಿಸುವ ಮತ್ತು ಪ್ರವಾದಿಯಂತೆ ನಟಿಸುವ ವ್ಯಕ್ತಿಯನ್ನು ನೀನು ಬಂಧಿಸಬೇಕು, ಅವನಿಗೆ ಕೋಳಹಾಕಿ ಕೊರಳಿಗೆ ಕಬ್ಬಿಣದ ಕಂಠಪಟ್ಟಿಯನ್ನು ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |