Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಹೀಗಿರುವಲ್ಲಿ, ನಿಮ್ಮ ಮಧ್ಯೆ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಖಂಡಿಸಲಿಲ್ಲವೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೀಗಿರಲು ನಿಮ್ಮ ಮಧ್ಯದಲ್ಲಿ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಖಂಡಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈಗ ಯೆರೆಮೀಯನು ಪ್ರವಾದಿಯಂತೆ ನಟಿಸುತ್ತಿದ್ದಾನೆ. ನೀನು ಅವನನ್ನು ಏಕೆ ಬಂಧಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಗದರಿಸಲಿಲ್ಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:27
13 ತಿಳಿವುಗಳ ಹೋಲಿಕೆ  

ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.


ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.


“ನೀವು ಈ ಹೆಸರಿನಲ್ಲಿ ಉಪದೇಶಮಾಡಲೇ ಬಾರದೆಂದು ನಾವು ನಿಮಗೆ ಕಟ್ಟಪ್ಪಣೆ ಕೊಡಲಿಲ್ಲವೇ? ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ವ್ಯಕ್ತಿಯ ರಕ್ತಕ್ಕೆ ನಾವೇ ಹೊಣೆಗಾರರು ಎಂದು ನಮ್ಮನ್ನು ಜವಾಬ್ಧಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದು ಹೇಳಿದನು.


“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;


“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.


ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.


ಅನಾತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳೂ ದೊರಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು