Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇವನು, ‘ಪರದೇಶ ವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬುದಾಗಿ ಬರೆದ ಕಾರಣ ನಾನು ನಿನ್ನನ್ನು ದಂಡಿಸುವುದು ಖಂಡಿತ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅವನು ಬಾಬಿಲೋನಿನಲ್ಲಿರುವ ನಮಗೆ ಪತ್ರ ಕಳಿಸಿ, ‘ಪರದೇಶವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ತಿಳಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇವನು - ಪರದೇಶ ವಾಸವು ನಿಮಗೆ ದೀರ್ಘವಾಗುವದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ ಎಂದು ಬಾಬೆಲಿನಲ್ಲಿರುವ ನಮಗೆ ಹೇಳಿ ಕಳುಹಿಸಿದ್ದಾನೆ ನೋಡು ಎಂಬದಾಗಿ ಬರೆದ ಕಾರಣ [ನಾನು ನಿನ್ನನ್ನು ದಂಡಿಸುವದು ಖಂಡಿತ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಯೆರೆಮೀಯನು ಬಾಬಿಲೋನಿನಲ್ಲಿದ್ದ ನಮಗೆ ಈ ಸಂದೇಶವನ್ನು ಕಳುಹಿಸಿದ್ದಾನೆ: ಬಾಬಿಲೋನಿನಲ್ಲಿರುವ ನೀವು ಅಲ್ಲಿ ಬಹಳ ಕಾಲದವರೆಗೆ ಇರುವಿರಿ. ಆದ್ದರಿಂದ ಮನೆಗಳನ್ನು ಕಟ್ಟಿಕೊಂಡು ಅಲ್ಲಿ ನೆಲೆಸಿರಿ; ತೋಟಗಳನ್ನು ಬೆಳೆಸಿರಿ; ಮತ್ತು ನೀವು ಬೆಳೆದದ್ದನ್ನು ಆಹಾರವನ್ನಾಗಿ ಬಳಸಿರಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ, ಅವನು ಸೆರೆಯು ಬಹಳ ದೀರ್ಘವಾಗುವುದು, ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ; ಎಂದು ನಮಗೆ ಬಾಬಿಲೋನಿಗೆ ಹೇಳಿ ಕಳುಹಿಸಿದ್ದಾನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:28
3 ತಿಳಿವುಗಳ ಹೋಲಿಕೆ  

ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಅವುಗಳ ಫಲವನ್ನು ಅನುಭವಿಸಿರಿ.


ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು