ಯೆರೆಮೀಯ 29:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನಗೆ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದ್ದರಿಂದ ಅವನನ್ನು ನಾನು ತಕ್ಷಣ ದಂಡಿಸುತ್ತೇನೆ. ನಾನು ಅವನ ಕುಟುಂಬವನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ. ನಾನು ನನ್ನ ಜನರಿಗಾಗಿ ಮಾಡುವ ಒಳ್ಳೆಯವುಗಳಲ್ಲಿ ಅವನು ಪಾಲು ಹೊಂದುವುದಿಲ್ಲ.’” ಇದು ಯೆಹೋವನ ನುಡಿ. “‘ಶೆಮಾಯನು, ಜನರನ್ನು ಯೆಹೋವನಾದ ನನ್ನ ವಿರುದ್ಧ ತಿರುಗುವಂತೆ ಮಾಡಿದ್ದರಿಂದ ನಾನು ಅವನನ್ನು ದಂಡಿಸುವೆನು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ” ಅಧ್ಯಾಯವನ್ನು ನೋಡಿ |
ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.