Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 29:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ, ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳಿಂದಲೂ ಶಕುನದವರಿಂದಲೂ ಮೋಸಹೋಗಬೇಡಿರಿ; ನಿಮಗಾಗಿ ಕನಸುಕಂಡು ಹೇಳುವವರಿಗೆ ಕಿವಿಗೊಡದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರ ದೇವರೂ, ಸರ್ವಶಕ್ತನೂ ಆಗಿರುವ ಯೆಹೋವನು, ಹೀಗೆನ್ನುತ್ತಾನೆ: “ನಿಮ್ಮ ಪ್ರವಾದಿಗಳು ಮತ್ತು ಮಾಟಮಂತ್ರಗಾರರು ನಿಮ್ಮನ್ನು ಮರುಳುಗೊಳಿಸದಿರಲಿ. ಅವರು ನೋಡುವ ಕನಸುಗಳಿಗೆ ಕಿವಿಗೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳೂ ನಿಮ್ಮ ಶಕುನದವರೂ ನಿಮಗೆ ಮೋಸಮಾಡದಿರಲಿ. ನೀವು ಕೇಳುವ ನಿಮ್ಮ ಕನಸುಗಳಿಗೆ ಕಿವಿಗೊಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 29:8
36 ತಿಳಿವುಗಳ ಹೋಲಿಕೆ  

ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?


ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿನವರು, ಕಣಿಯವರು, ಮಾಟದವರು, ಇವರಿಗೆ ಕಿವಿಗೊಡಲೇಬಾರದು.


ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.


ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.


ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.


ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ.


“ಜನರೆಲ್ಲಾ ನಿಮ್ಮನ್ನು ಹೊಗಳಿದರೆ ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪೂರ್ವಿಕರು ಸುಳ್ಳುಪ್ರವಾದಿಗಳನ್ನು ಹಾಗೆಯೇ ಹೊಗಳಿದ್ದರು.


ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;


ಗಾಳಿಯನ್ನೂ, ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು, “ನಾನು ದ್ರಾಕ್ಷಾರಸ, ಮಧ್ಯಗಳ ವಿಷಯವಾಗಿ ನಿನಗೆ ಪ್ರವಾದನೆ ಮಾಡುವೆನು” ಎಂದು ಹೇಳಿದರೆ, ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ, ತಾವೇ ಆತುರಗೊಂಡರು; ನಾನು ಇವರಿಗೆ ಏನೂ ಹೇಳಲಿಲ್ಲ, ಅವರೇ ಪ್ರವಾದಿಸಿದರು.


ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,


ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು?


ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ಪ್ರವಾದಿಯಾದ ಯೆರೆಮೀಯನು ಸೆರೆಹೋಗಿದ್ದ ಹಿರಿಯರಲ್ಲಿ ಉಳಿದವರಿಗೂ, ಯಾಜಕರಿಗೂ, ಪ್ರವಾದಿಗಳಿಗೂ ಅಂತು ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಿದ್ದ ಸಕಲ ಜನರಿಗೂ ಯೆರೂಸಲೇಮಿನಿಂದ ಬರೆದು ರವಾನಿಸಿದ ಕಾಗದದ ಮಾತುಗಳು.


ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.


ಯೆಹೋವನು ಇಂತೆನ್ನುತ್ತಾನೆ, “ಕಸ್ದೀಯರು ನಮ್ಮಿಂದ ತೊಲಗಿ ಹೋಗುವುದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವುದೇ ಇಲ್ಲ.


ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.


ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು; ಯೆಹೋವನು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.


ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.


ನೀವೋ, “ಯೆಹೋವನು ನಮಗಾಗಿ ಬಾಬೆಲಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾನಲ್ಲಾ” ಅಂದುಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು