ಯೆರೆಮೀಯ 3:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಹೀಗೆ ನುಡಿದನು: “ಒಬ್ಬನು ತನ್ನ ಹೆಂಡತಿಯೊಂದಿಗೆ ವಿವಾಹವಿಚ್ಛೇದನ ಮಾಡಿಕೊಂಡ ಮೇಲೆ ಅವಳು ಮತ್ತೊಬ್ಬನನ್ನು ಮದುವೆಯಾದರೆ ಆ ಮೊದಲನೆಯ ಗಂಡನು ಪುನಃ ಅವಳಲ್ಲಿಗೆ ಬರಲು ಸಾಧ್ಯವೇ? ಇಲ್ಲ. ಆ ಮನುಷ್ಯನು ಪುನಃ ಆ ಸ್ತ್ರೀಯಲ್ಲಿಗೆ ಹೋದರೆ ಆ ದೇಶವು ಪರಿಪೂರ್ಣವಾಗಿ ಅಪವಿತ್ರವಾಗುತ್ತದೆ. ಯೆಹೂದವೇ, ನೀನು ಬಹು ಜನರೊಂದಿಗೆ ಕಾಮದಾಟವಾಡಿದ ವೇಶ್ಯಾ ಸ್ತ್ರೀಯಂತೆ ವರ್ತಿಸಿದೆ. ಈಗ ನೀನು ಪುನಃ ನನ್ನಲ್ಲಿಗೆ ಬರಲು ಇಚ್ಛಿಸುವಿಯಾ?” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ, ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ, ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ, ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ? ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ. ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |