ಯೆರೆಮೀಯ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದೇ ಯೆಹೋವನ ನುಡಿ - ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ; ಒಂದು ಪಟ್ಟಣಕ್ಕೆ ಒಬ್ಬನಂತೆಯೂ ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರತರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ವಿಶ್ವಾಸದ್ರೋಹಿಗಳಾದ ಜನರೇ, ನನ್ನಲ್ಲಿಗೆ ಹಿಂತಿರುಗಿ ಬನ್ನಿ” ಇದು ಯೆಹೋವನ ನುಡಿಯಾಗಿತ್ತು. “ನಾನೇ ನಿಮ್ಮ ಒಡೆಯನು. ನಾನು ಪ್ರತಿಯೊಂದು ನಗರದಿಂದ ಒಬ್ಬ ವ್ಯಕ್ತಿಯನ್ನು ಮತ್ತು ಪ್ರತಿಯೊಂದು ಕುಲದಿಂದ ಇಬ್ಬರನ್ನು ಆರಿಸಿ ಚೀಯೋನಿಗೆ ಕರೆದು ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು. ಅಧ್ಯಾಯವನ್ನು ನೋಡಿ |
ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.