ಯೆರೆಮೀಯ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನೀವು ನಾಡಿನಲ್ಲಿ ಹೆಚ್ಚಿ ಅಭಿವೃದ್ಧಿಯಾದಾಗ, ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವೆಲ್ಲಿ?’ ಎಂದು ಪ್ರಸ್ತಾಪಿಸುವಂತಿಲ್ಲ. ಅದು ಜ್ಞಾಪಕಕ್ಕೆ ಬರುವುದಿಲ್ಲ, ಯಾರೂ ಅದನ್ನು ಸ್ಮರಿಸುವುದಿಲ್ಲ. ಅದು ಇಲ್ಲವಲ್ಲಾ ಎಂದು ದುಃಖಿಸುವುದಿಲ್ಲ. ಹೊಸದೊಂದನ್ನು ಕಲ್ಪಿಸಿಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನೀವು ದೇಶದಲ್ಲಿ ಹೆಚ್ಚಿನ ವೃದ್ಧಿಗೆ ಬಂದಿರುವಾಗ ಇನ್ನು ಯೆಹೋವನ ನಿಬಂಧನಮಂಜೂಷದ ಪ್ರಸ್ತಾಪವಿರದು, ಅದು ಜ್ಞಾಪಕಕ್ಕೆಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು, ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ದೇಶದಲ್ಲಿ ನಿಮ್ಮ ಸಂಖ್ಯೆ ಬೆಳೆಯುವದು” ಇದು ಯೆಹೋವನ ನುಡಿ. “ಆ ಕಾಲದಲ್ಲಿ ಜನರು, ‘ನಮ್ಮಲ್ಲಿ ಯೆಹೋವನ ಒಡಂಬಡಿಕೆಯ ಪೆಟ್ಟಿಗೆ ಇದ್ದ ದಿನಗಳನ್ನು ಜ್ಞಾಪಿಸಿಕೊಳ್ಳುವ’ ಎಂದು ಹೇಳುವುದಿಲ್ಲ. ಅವರು, ‘ಪವಿತ್ರ ಪೆಟ್ಟಿಗೆ’ಯ ಬಗ್ಗೆ ಯೋಚನೆ ಸಹ ಮಾಡುವುದಿಲ್ಲ. ಅವರು ಅದನ್ನು ಜ್ಞಾಪಿಸುವುದೂ ಇಲ್ಲ. ಅದರ ಅಭಾವವನ್ನು ಮನಸ್ಸಿಗೆ ತಂದುಕೊಳ್ಳುವುದೂ ಇಲ್ಲ. ಅವರು ಇನ್ನೊಂದು ‘ಪವಿತ್ರ ಪೆಟ್ಟಿಗೆ’ಯನ್ನು ಸಿದ್ಧಪಡಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ದೇಶದಲ್ಲಿ ಅಭಿವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷವು,’ ಎಂದು ಇನ್ನು ಮೇಲೆ ಅವರು ಹೇಳದಿರುವರು. ಅದು ಮನಸ್ಸಿಗೆ ಬರುವುದಿಲ್ಲ, ಯಾರು ಅದನ್ನು ಸ್ಮರಿಸುವುದಿಲ್ಲ, ಅದರ ಬಗ್ಗೆ ವಿಚಾರಿಸುವುದೂ ಇಲ್ಲ; ಇನ್ನು ಮೇಲೆ ಸರಿಯಾಗುವುದಿಲ್ಲ ಎಂದು ಯೆಹೋವ ದೇವರು ನುಡಿಯುತ್ತಾರೆ. ಅಧ್ಯಾಯವನ್ನು ನೋಡಿ |