ಯೆರೆಮೀಯ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇವಿುಗೆ ಸಕಲ ಜನಾಂಗಗಳವರು ನೆರೆದುಬರುವರು; ಇನ್ನು ಮೇಲೆ ತಮ್ಮ ದುಷ್ಟಹೃದಯದ ಹಟದಂತೆ ನಡೆಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ಕಾಲದಲ್ಲಿ ಜೆರುಸಲೇಮ್ ನಗರಕ್ಕೆ ‘ಯೆಹೋವನ ಸಿಂಹಾಸನ’ ಎಂದು ಕರೆಯುವರು. ಯೆಹೋವನ ಹೆಸರಿಗೆ ಗೌರವ ಸೂಚಿಸಲು ಎಲ್ಲಾ ಜನಾಂಗದವರು ಜೆರುಸಲೇಮಿನಲ್ಲಿ ಬಂದು ಸೇರುವರು. ಅವರು ತಮ್ಮ ದುಷ್ಟ ಮತ್ತು ಹಟಮಾರಿ ಹೃದಯಗಳನ್ನು ಅನುಸರಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು. ಅಧ್ಯಾಯವನ್ನು ನೋಡಿ |