Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆ ಕಾಲದಲ್ಲಿ ಯೆಹೂದದ ಜನರು ಇಸ್ರೇಲ್ ಜನರನ್ನು ಕೂಡಿಕೊಳ್ಳುವರು. ಅವೆರಡೂ ಕೂಡಿ ಉತ್ತರದಿಕ್ಕಿನ ಪ್ರದೇಶದಿಂದ ಬರುವರು. ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶಕ್ಕೆ ಅವರು ಬರುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:18
22 ತಿಳಿವುಗಳ ಹೋಲಿಕೆ  

ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು, ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕುವುದಿಲ್ಲ” ಇದು ನಿನ್ನ ದೇವರಾದ ಯೆಹೋವನ ನುಡಿ.


ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.


ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.


‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.


ಎಫ್ರಾಯೀಮು ಸುಳ್ಳಿನಿಂದಲೂ, ಇಸ್ರಾಯೇಲ್ ವಂಶವು ಮೋಸದಿಂದಲೂ ನನ್ನನ್ನು ಮುತ್ತಿಕೊಂಡಿವೆ; ಯೆಹೂದವು ಸತ್ಯಸಂಧನೂ, ಸದಮಲಸ್ವಾಮಿಯೂ ಆದ ದೇವರ ಕಡೆಯಿಂದ ಇನ್ನೂ ಅಲೆದಾಡುತ್ತಿದೆ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”


ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅವರನ್ನು ಜನಾಂಗಗಳೊಳಗಿಂದ ಕೂಡಿಸುವೆನು, ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಾಯೇಲ್ ದೇಶವನ್ನು ಅವರಿಗೆ ದಯಪಾಲಿಸುವೆನು.’


ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.


‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,


“ನಿಮ್ಮ ತಾಯಿಯ ಸಂಗಡ ವಾದಮಾಡಿ; ಅವಳು ನನ್ನ ಹೆಂಡತಿಯಲ್ಲ, ನಾನು ಅವಳ ಗಂಡನಲ್ಲ. ಅವಳು ವ್ಯಭಿಚಾರವನ್ನು ತನ್ನ ಮುಖಸೌಂದರ್ಯದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು