Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಎಣಿಸಿ ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತಜನಾಂಗಗಳ ಬಾಧ್ಯಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ತಂದೆಯೆನ್ನುವಿ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನಾದ ನಾನು ಹೀಗೆಂದುಕೊಂಡೆ: “ನಾನು ಸಂತೋಷದಿಂದ ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುವೆನು. ಬೇರೆ ಎಲ್ಲಾ ಜನಾಂಗಗಳ ಪ್ರದೇಶಕ್ಕಿಂತ ಅತಿ ಸುಂದರವಾದ ಪ್ರದೇಶವನ್ನು ನಿಮಗೆ ಕೊಡುವುದಕ್ಕೆ ನಾನು ಸಂತೋಷಪಡುವೆನು. ನೀವು ನನ್ನನ್ನು ‘ತಂದೆ’ ಎಂದು ಕರೆಯುವಿರೆಂದು ನಾನು ಭಾವಿಸಿದ್ದೆ. ನೀವು ಯಾವಾಗಲೂ ನನ್ನ ಹಿಂಬಾಲಕರಾಗಿರುವಿರೆಂದು ಭಾವಿಸಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಹೇಳುವುದೇನೆಂದರೆ: “ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು ಎಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:19
32 ತಿಳಿವುಗಳ ಹೋಲಿಕೆ  

ಈಗ ನನ್ನನ್ನು, ‘ನನ್ನ ತಂದೆ, ನನ್ನ ಯೌವನದ ಆಪ್ತನು’ ಎಂದು ಕರೆಯುತ್ತೀಯಲ್ಲಾ.


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ.


ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.


ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತ್ಯಜಿಸಲಿ! ಇಸ್ರಾಯೇಲೇ, ಹೇಗೆ ನಿನ್ನನ್ನು ಕೈಬಿಡಲಿ! ಅಯ್ಯೋ, ನಿನ್ನನ್ನು ಅದ್ಮಾದ ಗತಿಗೆ ಹೇಗೆ ತರಲಿ! ಚೆಬೋಯಿಮಿನಂತೆ ಹೇಗೆ ನಾಶಮಾಡಲಿ! ನನ್ನ ಮನಸ್ಸು ನನ್ನೊಳಗೆ ತಿರುಗಿತು, ಕರುಳು ತೀರಾ ಮರುಗಿತು.


ಸಮುದ್ರಕ್ಕೂ, ಅಂದ ಚಂದದ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು. ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯ ಮಾಡರು.”


ಅಂದ ಚಂದದ ದೇಶಕ್ಕೂ ನುಗ್ಗುವನು. ಅನೇಕ ಸೀಮೆಗಳು ಅವನಿಂದ ಹಾಳಾಗುವವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು, ಅವನ ಕೈಯಿಂದ ತಪ್ಪಿಸಿಕೊಳ್ಳುವರು.


ದಕ್ಷಿಣ ದಿಕ್ಕಿನ ರಾಜನಿಗೆ ವಿರುದ್ಧವಾಗಿ ಬರುವವನು ತನ್ನ ಇಚ್ಛಾನುಸಾರ ನಡೆಯುವನು. ಅವನನ್ನು ಎದುರಿಸುವವರು ಯಾರು ಇಲ್ಲ, ನಾಶವನ್ನು ಕೈಯಲ್ಲಿಟ್ಟುಕೊಂಡು ಅಂದ ಚಂದದ ದೇಶದಲ್ಲಿ ನಿಂತಿರುವನು.


ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು ಬಹು ದೊಡ್ಡದಾಗಿ ಬೆಳೆದು ದಕ್ಷಿಣದಲ್ಲಿಯೂ, ಪೂರ್ವದಲ್ಲಿಯೂ ಅಂದಚಂದದ ದೇಶದಲ್ಲಿಯೂ ಪ್ರಬಲವಾಯಿತು.


ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.


ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.


ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.


ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.


ಜ್ಞಾನವಂತರು ಸನ್ಮಾನಕ್ಕೆ ಬಾಧ್ಯರಾಗುವರು, ಜ್ಞಾನಹೀನರಿಗಾಗುವ ಬಹುಮಾನವು ಅವಮಾನವೇ.


ಅವರು ಆ ರಮಣೀಯ ದೇಶವನ್ನು ತಿರಸ್ಕರಿಸಿದರು, ಆತನ ಮಾತನ್ನು ನಂಬಲಿಲ್ಲ.


ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.


ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.


ಅವನು ನನಗೆ, ‘ನನ್ನ ತಂದೆಯೂ, ದೇವರೂ, ಆಶ್ರಯದುರ್ಗವೂ ನೀನೇ’ ಎಂದು ಹೇಳುವನು.


ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು