Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಆದರೆ ಓ ಇಸ್ರಯೇಲ್ ವಂಶಜರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹಮಾಡಿರುವುದು ನಿಶ್ಚಯ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿಯೇ ಇದ್ದೀರಿ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ನೀವು ಗಂಡನಿಗೆ ವಂಚಿಸುವ ಜಾರಿಣಿಯಂತಾದಿರಿ. ಇಸ್ರೇಲ್ ವಂಶದವರೇ, ನೀವು ನನಗೆ ದ್ರೋಹ ಮಾಡಿದಿರಿ” ಎಂದು ಯೆಹೋವನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ, ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:20
11 ತಿಳಿವುಗಳ ಹೋಲಿಕೆ  

ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.


ಇಸ್ರಾಯೇಲ್ ವಂಶದವರೂ, ಯೆಹೂದ ವಂಶದವರೂ ನನಗೆ ಕೇವಲ ದ್ರೋಹವನ್ನು ಮಾಡಿರುತ್ತಾರೆ ಎಂದು ಯೆಹೋವನು ನುಡಿಯುತ್ತಾನೆ.


ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.


ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ.


ಅವು ಯೆಹೋವನ ಮಕ್ಕಳಲ್ಲದ ಮಕ್ಕಳನ್ನು ಪಡೆದು ಆತನಿಗೆ ದ್ರೋಹಮಾಡಿವೆ; ಅವುಗಳನ್ನೂ, ಅವುಗಳ ಭೂಸ್ವಾಸ್ತ್ಯಗಳನ್ನೂ ಈ ಅಮಾವಾಸ್ಯೆಯು ನುಂಗಿಬಿಡುವುದು.


ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.


ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು