Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 3:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾವು ಚಿಕ್ಕಂದಿನಿಂದ ನೋಡಿರುವಂತೆ ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಬಾಳ್ ದೇವತೆ ಕಬಳಿಸುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡು ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಮ್ಮ ಪೂರ್ವಿಕರು ಸಂಪಾದಿಸಿದ್ದೆಲ್ಲವನ್ನು ನೈವೇದ್ಯದಲ್ಲಿ ಸುಳ್ಳುದೇವರಾದ ಬಾಳನು ತಿಂದುಬಿಟ್ಟನು. ನಮ್ಮ ಬಾಲ್ಯದಿಂದಲೂ ಹೀಗಾಗುತಾ ಬಂದಿದೆ. ಭಯಂಕರವಾದ ಆ ಸುಳ್ಳು ದೇವರು ನಮ್ಮ ಪೂರ್ವಿಕರ ದನಕುರಿಗಳನ್ನೂ ಅವರ ಗಂಡುಹೆಣ್ಣುಮಕ್ಕಳನ್ನೂ ಬಲಿ ತೆಗೆದುಕೊಳ್ಳುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಾಚಿಕೆಯಾದದ್ದು, ನಮ್ಮ ಚಿಕ್ಕತನದಿಂದ ನಮ್ಮ ತಂದೆಗಳ ಕಷ್ಟವನ್ನೂ, ಅವರ ಕುರಿಗಳನ್ನೂ, ಅವರ ದನಗಳನ್ನೂ, ಅವರ ಪುತ್ರರನ್ನೂ, ಅವರ ಪುತ್ರಿಯರನ್ನೂ ತಿಂದುಬಿಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 3:24
12 ತಿಳಿವುಗಳ ಹೋಲಿಕೆ  

ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಅದು ಜಗಳಗಂಟ ಮಹಾರಾಜನಿಗೆ ಕಾಣಿಕೆಯಾಗಿ ಅಶ್ಶೂರಕ್ಕೆ ಒಯ್ಯಲ್ಪಡುವುದು. ಎಫ್ರಾಯೀಮಿಗೆ ಅವಮಾನವಾಗುವುದು, ಇಸ್ರಾಯೇಲ್ ತಾನು ಸಂಕಲ್ಪಿಸಿಕೊಂಡ ವಿಷಯಕ್ಕಾಗಿ ನಾಚಿಕೆಪಡುವುದು.


ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.


ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.


ಹೀಗಿರಲು ಸೇನಾಧೀಶ್ವರಸ್ವಾಮಿಯೂ ಇಸ್ರಾಯೇಲಿನ ದೇವರೂ ಆದ ಯೆಹೋವನು ಈಗ ಇಂತೆನ್ನುತ್ತಾನೆ, ಈ ದೊಡ್ಡ ಕೇಡನ್ನು ನಿಮಗೆ ನೀವೇ ಉಂಟುಮಾಡಿಕೊಳ್ಳುವುದೇಕೆ? ಈ ದುರಾಚಾರದ ನಿಮಿತ್ತ ಯೆಹೂದದಲ್ಲಿರುವ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು, ನಿಮ್ಮಲ್ಲಿ ಯಾರೂ ಉಳಿಯುವುದಿಲ್ಲ.


ಅವರು ತ್ವರೆಪಟ್ಟು ನಮ್ಮ ನೇತ್ರಗಳಿಂದ ಧಾರೆಹೊರಡುವಂತೆಯೂ, ನಮ್ಮ ಕಣ್ಣುಗಳಿಂದ ನೀರುಕ್ಕುವಂತೆಯೂ ನಮಗೋಸ್ಕರ ಗೋಳಾಡಲಿ.


ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.


“ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು