Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಇಂತೆನ್ನುತ್ತಾನೆ - ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:10
40 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ, ಆಕಾಶದ ಪಕ್ಷಿಗಳಿಗೂ, ನೆಲದ ಕ್ರಿಮಿಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲು, ಕತ್ತಿ ಮತ್ತು ಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ, ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.


ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.


ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ!


ಸಿಂಹವು ಅಲ್ಲಿ ಇರದು. ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗುವುದಿಲ್ಲ. ಅದು ಅಲ್ಲಿ ಕಾಣುವುದೇ ಇಲ್ಲ. ಬಿಡುಗಡೆಯಾದವರೇ ಅಲ್ಲಿ ನಡೆಯುವರು.


ಹೀಗೆ, “ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು, ಯೆರೂಸಲೇಮಿನವರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ‘ನಮ್ಮ ಸದ್ಧರ್ಮ’ ಎಂಬ ಹೆಸರು ಈ ಪಟ್ಟಣಕ್ಕೆ ಸಲ್ಲುವುದು.”


ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.


ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.


“ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಆ ದಿನದಲ್ಲಿ ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆ, ಅಂಜೂರಗಿಡ ಇವುಗಳ ನೆರಳಿನಲ್ಲಿ ನೆಮ್ಮದಿಯಿಂದ ವಿಶ್ರಮಿಸಲು ಕರೆಯುವಿರಿ.’”


ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.


ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.


ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.


“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.


ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”


ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.


ಯೆಹೋವನು ನಿಮ್ಮನ್ನು ಸಂಕಟದಿಂದಲೂ, ಕಳವಳದಿಂದಲೂ, ಕಠಿಣವಾದ ಬಿಟ್ಟಿ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ,


ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು:


ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.


ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”


ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.


ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಲಿಂದ ಮತ್ತು ಪಡವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವೆ.”


ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ.


ನೀನೀಗ ರೋದಿಸುತ್ತಿರುವುದೇಕೆ? ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದಕ್ಕೆ ಕಾರಣವೇನು? ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು