ಯೆರೆಮೀಯ 30:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾರೂ ಅದನ್ನು ಹೆದರಿಸರು. ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿ ಚದರಿಸಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು, ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ವಿುತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ. ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’ ಅಧ್ಯಾಯವನ್ನು ನೋಡಿ |