Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು. ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ಹೀಗನ್ನುತ್ತಾನೆ - ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ ಅದರ ನಿವಾಸಗಳನ್ನು ಕರುಣಿಸುವೆನು; ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ಹೀಗೆನ್ನುತ್ತಾನೆ, “ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:18
38 ತಿಳಿವುಗಳ ಹೋಲಿಕೆ  

ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯಮಿತ ಕಾಲವು ಬಂದಿದೆ.


ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.


ಯೆಹೂದದ ಮತ್ತು ಇಸ್ರಾಯೇಲಿನ ದುರವಸ್ಥೆಯನ್ನು ತಪ್ಪಿಸಿ ಮೊದಲಿನಂತೆಯೇ ಅವುಗಳನ್ನು ಉದ್ಧರಿಸುವೆನು.


ಇದು ಯೆಹೋವನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.


ಹೀಗಿರಲು ಯೆಹೋವನು ಇಂತೆನ್ನುತ್ತಾನೆ, “ನಾನು ಕನಿಕರವುಳ್ಳವನಾಗಿ ಯೆರೂಸಲೇಮಿಗೆ ಹಿಂದಿರುಗಿದ್ದೇನೆ; ನನ್ನ ಆಲಯವು ಪುನಃ ಅಲ್ಲಿ ಕಟ್ಟಲ್ಪಡುವುದು; ಯೆರೂಸಲೇಮಿನಲ್ಲಿ ನೂಲು ಎಳೆಯಲ್ಪಡುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.


ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”


ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”


ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು.


ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.


ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’” ಎಂಬುದಾಗಿ ಮಾತನಾಡುವವನು ನಾನೇ.


ಯೆಹೋವನು, “ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವುದು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ’ ಎಂದು ಮತ್ತೆ ಮಾತನಾಡುವರು.


“ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ, ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇಮಿನವರು ತಮ್ಮ ಸ್ಥಳವಾದ ಯೆರೂಸಲೇಮಿನಲ್ಲೇ ಇನ್ನು ವಾಸಿಸುವರು;


ಆತನು ತನ್ನ ಆಲಯವನ್ನು ಪರ್ವತದಂತೆಯೂ, ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು.


ಪಟ್ಟಣವು ವಿಸ್ತಾರವಾಗಿದ್ದರೂ ಅದರೊಳಗೆ ಬಹಳ ಸ್ವಲ್ಪ ಜನರು ಮಾತ್ರ ಇದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.


ಯೆಹೋವನೇ, ನಿನ್ನ ದೇಶವನ್ನು ಕಟಾಕ್ಷಿಸಿದ್ದಿ; ಯಾಕೋಬ್ಯರನ್ನು ಸೆರೆಯಿಂದ ಬಿಡಿಸಿ ಬರಮಾಡಿದ್ದಿ.


ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.


ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.


ತರುವಾಯ ಅರಸನಾದ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನೇ ದೇವಾಲಯ ಕಟ್ಟಲು ಆರಿಸಿಕೊಂಡಿದ್ದಾನೆ. ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಹೊರತು ಮನುಷ್ಯನಿಗಾಗಿಯಲ್ಲ.


ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.


ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.


ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”


ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.


ಈ ದೇಶದಲ್ಲಿ ಜನರು ಮನೆ, ಹೊಲ ಮತ್ತು ದ್ರಾಕ್ಷಿತೋಟಗಳನ್ನು ಪುನಃ ಕೊಂಡುಕೊಳ್ಳುವರು, ಕೊಡುವರು. ಇದು ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿ’” ಎಂದು ಖಂಡಿತವಾಗಿ ಹೇಳಿದೆನು.


ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.


ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.


ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,


ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;


ಅದು ಕಲ್ಲುಕುಪ್ಪೆಯಾಗಿ ಹೋಗಿದ್ದರೂ, ಅದು ನಿನ್ನ ಸೇವಕರಿಗೆ ಅತಿಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.


ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು