Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು. ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವುಗಳೊಳಗಿಂದ ಸ್ತೋತ್ರವೂ ವಿನೋದಪಡುವವರ ಧ್ವನಿಯೂ ಕೇಳಿಸುವವು; ನಾನು ಆ ಜನರನ್ನು ಹೆಚ್ಚಿಸುವೆನು, ಇನ್ನು ಕೊಂಚವಾಗಿರರು, ಅವರನ್ನು ಘನಪಡಿಸುವೆನು, ಇನ್ನು ಹೀನರಾಗಿರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:19
39 ತಿಳಿವುಗಳ ಹೋಲಿಕೆ  

ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಚಿಕ್ಕವನಿಂದ ಒಂದು ಕುಲವಾಗುವುದು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಲುಬೇಗನೆ ಉಂಟುಮಾಡುವೆನು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು.


ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.


ಆ ದಿನದಲ್ಲಿ ಯೆಹೋವನು ಯೆರೂಸಲೇಮಿನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವುದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ನಾಲ್ಕನೆಯ ತಿಂಗಳಿನ ಉಪವಾಸ, ಐದನೆಯ ತಿಂಗಳಿನ ಉಪವಾಸ, ಏಳನೆಯ ತಿಂಗಳಿನ ಉಪವಾಸ, ಹತ್ತನೆಯ ತಿಂಗಳಿನ ಉಪವಾಸ ಇವು ಯೆಹೂದ ವಂಶಕ್ಕೆ ವಿಶೇಷವಾದ ಹಬ್ಬಗಳಾಗಿ ಹರ್ಷೋಲ್ಲಾಸಗಳನ್ನು ಉಂಟುಮಾಡುವವು; ಹೀಗಿರಲು ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.’”


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ಆ ದಿನದಲ್ಲಿ ನೀನು ಹೇಳುವುದೇನೆಂದರೆ, “ಯೆಹೋವನೇ ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತದೆ.


ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.


ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಇನ್ನು ಮೇಲೆ ಹಗಲಿನಲ್ಲಿ ನಿನಗಿರುವ ಪ್ರಕಾಶವು ಸೂರ್ಯನದಲ್ಲ; ಚಂದ್ರನು ನಿನ್ನ ಬೆಳಕಿಗಾಗಿ ಎಂದಿಗೂ ಕಳೆಗುಂದುವುದಿಲ್ಲ; ಯೆಹೋವನೇ ನಿನಗೆ ನಿತ್ಯಪ್ರಕಾಶವು, ನಿನ್ನ ದೇವರೇ ನಿನಗೆ ತೇಜಸ್ಸು.


ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ! ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ.


“ನೀನು ಓಡು, ಆ ಯುವಕನಿಗೆ ಈ ಮಾತನ್ನು ತಿಳಿಸು, ‘ಯೆರೂಸಲೇಮಿನಲ್ಲಿರುವ ಜನ ಮತ್ತು ಪಶುಗಳ ಸಂಖ್ಯೆಯು ಅಪಾರವಾಗಿರುವುದರಿಂದ ಅದು ಪೌಳಿಗೋಡೆಯಿಲ್ಲದ ಹಳ್ಳಿಪಳ್ಳಿಗಳಂತೆ ಹರಡಿಕೊಂಡು ನೆಲೆಯಾಗಿರುವುದು.


ಕರ್ತನಾದ ಯೆಹೋವನು, “ಇಗೋ, ನಾನು ಇಸ್ರಾಯೇಲ್ ಮತ್ತು ಯೆಹೂದ ಕ್ಷೇತ್ರಗಳಲ್ಲಿ ಮನುಷ್ಯರನ್ನೂ, ಪಶುಗಳನ್ನೂ ಬಿತ್ತುವ ದಿನಗಳು ಬರುವವು.


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”


ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.


ನೂನನ ಮಗನಾದ ಯೆಹೋಶುವನ ಕಾಲದಿಂದ ಆ ವರೆಗೂ ಇಸ್ರಾಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿ ಬಂದ ಸರ್ವ ಸಮೂಹದವರಾದರೋ ಬಿಡಾರಗಳನ್ನು ಮಾಡಿಕೊಂಡು ಅವುಗಳಲ್ಲಿ ವಾಸಮಾಡುತ್ತಾ ಬಹಳ ಸಂತೋಷಪಟ್ಟರು.


ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.


ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.


ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.


ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.


ನನಗೆ ಕೊಟ್ಟ ಅಪ್ಪಣೆಯಂತೆ ನಾನು ನುಡಿದು, ಶ್ವಾಸ ಊದಿದೆ. ಇಗೋ, ಉಸಿರು ಅವುಗಳಲ್ಲಿ ಬಂದಿತು, ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ಮಹಾ ಸೈನ್ಯವಾದವು.


ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.


ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು