ಯೆರೆಮೀಯ 30:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇಗೋ ನಾನು ನನ್ನ ಜನರಾದ ಇಸ್ರಾಯೇಲ್ಯರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪಿತೃಗಳಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.” ಅಧ್ಯಾಯವನ್ನು ನೋಡಿ |
ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.
ಅವರು ಯೆರೂಸಲೇಮಿನ ದೇವಾಲಯವನ್ನು ತಲುಪಿದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್, ಯೋಚಾದಾಕನ ಮಗನಾದ ಯೇಷೂವ ಇವರೂ, ಲೇವಿಯರೂ, ಸೆರೆಯಿಂದ ಯೆರೂಸಲೇಮಿಗೆ ಹಿಂತಿರುಗಿ ಬಂದ ಬೇರೆ ಎಲ್ಲರೂ ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿ, ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸುಳ್ಳ ಲೇವಿಯರನ್ನು ಯೆಹೋವನ ಆಲಯದಲ್ಲಿ ಕಟ್ಟುವವರ ಮೇಲ್ವಿಚಾರಣೆಗಾಗಿ ನೇಮಿಸಿದರು.