Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 30:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ, ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 30:7
37 ತಿಳಿವುಗಳ ಹೋಲಿಕೆ  

“ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ, ಆತನ ಸೈನ್ಯ ಬಹಳ ದೊಡ್ಡದಾಗಿದೆ; ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ. ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ. ಅದನ್ನು ಸಹಿಸಿಕೊಳ್ಳುವವರು ಯಾರು?


ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.


ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.


ಯೆಹೂದ್ಯರು ಮತ್ತು ಇಸ್ರಾಯೇಲರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.


ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.”


ನೀತಿವಂತನಿಗೆ ಸಂಭವಿಸುವ ಕಷ್ಟಗಳು ಅನೇಕವಿದ್ದರೂ, ಯೆಹೋವನು ಅವೆಲ್ಲವುಗಳಿಂದ ಅವನನ್ನು ಬಿಡಿಸುತ್ತಾನೆ.


ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಯಾರ ಕೈಯೂ ಸೋಕದೆ ಕ್ಷಣಮಾತ್ರದಲ್ಲಿ ಹಾಳಾದ ಸೊದೋಮಿನ ಪಾಪಕ್ಕಿಂತಲೂ, ನನ್ನ ಪ್ರಜೆಯ ಅಧರ್ಮವು ಹೆಚ್ಚಾಯಿತಲ್ಲಾ.


ಯೆರೂಸಲೇಮ್ ಕನ್ಯೆಯೇ, ನಾನು ನಿನಗೆ ಏನು ಹೇಳಲಿ, ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಚೀಯೋನ್ ಕನ್ಯೆಯೇ, ನಿನ್ನನ್ನು ಸಂತೈಸಲು ಸಮಾಧಾನಕರ ಮಾತುಗಳನ್ನು ಎಲ್ಲಿಂದ ತರಲಿ? ನಿನ್ನ ನಾಶನವು ಸಾಗರದಷ್ಟು ಅಪಾರ, ನಿನ್ನನ್ನು ಯಾರು ಸ್ವಸ್ಥಮಾಡಬಲ್ಲರು?


ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.


ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.


ಆ ದಿನದಲ್ಲಿ ಈ ತೀರದಲ್ಲಿ ವಾಸಿಸುವವರು ಹೇಳುವುದೇನೆಂದರೆ, “ಇಗೋ, ಅಶ್ಶೂರದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?” ಎಂದು ಅಂದುಕೊಳ್ಳುವರು.


ಅವರು ನನ್ನ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡಿದ್ದಾರೆ, ಆದರೆ ಅವರಿಗೆ ಕೇಡು ಸಂಭವಿಸಿದಾಗ, “ಎದ್ದು ನಮ್ಮನ್ನು ಉದ್ಧರಿಸು” ಎಂದು ಮೊರೆಯಿಡುವರು.


ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.


ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?


ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?


ಯೆಹೋವನು ಬರುವ ದಿನವು ಸಮೀಪಿಸಿತು. ಅದು ಸರ್ವಶಕ್ತನಾದ ಯೆಹೋವನಿಂದ ನಾಶವಾಗುವ ದಿನ.


ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.


ನೀನೀಗ ರೋದಿಸುತ್ತಿರುವುದೇಕೆ? ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದಕ್ಕೆ ಕಾರಣವೇನು? ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ?


ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು