Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 31:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನು ಹೀಗೆನ್ನುತ್ತಾನೆ: “ಎಫ್ರಾಯೀಮ್ ನನ್ನ ಪ್ರೀತಿಯ ಮಗನೆಂಬುದು ನೀನು ಬಲ್ಲೆ. ನಾನು ಆ ಮಗುವನ್ನು ಪ್ರೀತಿಸುತ್ತೇನೆ. ಹೌದು, ನಾನು ಹಲವು ಸಲ ಎಫ್ರಾಯೀಮನ ವಿರುದ್ಧವಾಗಿ ಮಾತನಾಡುತ್ತೇನೆ. ಆದಾಗ್ಯೂ ನಾನು ಅವನನ್ನು ಜ್ಞಾಪಿಸಿಕೊಳ್ಳುತ್ತೇನೆ. ನಾನು ಅವನನ್ನು ತುಂಬಾ ಪ್ರೀತಿಸುತ್ತೇನೆ. ನಾನು ನಿಜವಾಗಿಯೂ ಅವನನ್ನು ಸಂತೈಸಬಯಸುತ್ತೇನೆ.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 31:20
27 ತಿಳಿವುಗಳ ಹೋಲಿಕೆ  

ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.


ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ.


ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.


ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.


ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು.


ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.


ಆದುದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವು, ಕೀರ್ ಹೆರೆಸಿನ ನಿಮಿತ್ತ ನನ್ನ ಅಂತರಂಗವು ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.


ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.


“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.


ನನ್ನ ಕಾಂತನು ಬಾಗಿಲ ರಂಧ್ರದಲ್ಲಿ ಕೈ ನೀಡಿದನು, ಅವನಿಗಾಗಿ ನನ್ನ ಮನ ಮಿಡಿಯಿತು.


ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.


ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರಳು ಮರುಗಿ ಅರಸನಿಗೆ, “ನನ್ನ ಒಡೆಯಾ ಬೇಡ, ಬದುಕಿರುವ ಕೂಸನ್ನು ಅವಳಿಗೆ ಕೊಟ್ಟುಬಿಡು. ಅದನ್ನು ಕೊಲ್ಲಿಸಬೇಡ” ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ ಕತ್ತರಿಸಲಿ” ಎಂದು ಕೂಗಿದಳು.


ಆಗ ಯೆಹೋವನು ತನ್ನ ಜನರಿಗಾಗಿ ನ್ಯಾಯತೀರಿಸುವನು. ಪರತಂತ್ರರಾಗಲಿ ಅಥವಾ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಿತರಾಗಿ ನಿಶ್ಶೇಷರಾದುದ್ದನ್ನು ಆತನು ತಿಳಿದು ತನ್ನ ಸೇವಕರ ವಿಷಯದಲ್ಲಿ ಕನಿಕರಪಡುವನು.


ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.


ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೆನು. ನಾನು ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.”


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ, ತಾತ್ಸಾರಮಾಡುವುದಿಲ್ಲ; ನಾನು ಅವರಿಗೆ ಮಾಡಿದ ಒಡಂಬಡಿಕೆಯನ್ನು ಮೀರುವುದಿಲ್ಲ, ಅವರನ್ನು ಇಲ್ಲದಂತೆ ಮಾಡುವುದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.


ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು