ಯೆರೆಮೀಯ 31:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ. ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದಾರಿದೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೋ; ನೀನು ಯಾವ ಮಾರ್ಗದಲ್ಲಿ ಹೋಗಿಬಿಟ್ಟಿಯೋ ಅದಕ್ಕೆ ನಿನ್ನ ಮನಸ್ಸನ್ನು ತಿರುಗಿಸಿಕೋ; ಇಸ್ರಾಯೇಲೆಂಬ ಯುವತಿಯೇ, ತಿರುಗಿಕೋ, ಈ ನಿನ್ನ ಪಟ್ಟಣಗಳಿಗೆ ಹಿಂದಿರುಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಇಸ್ರೇಲರೇ, ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನೆಡಿರಿ. ನೀವು ಪ್ರಯಾಣ ಮಾಡುತ್ತಿರುವ ರಸ್ತೆಯನ್ನು ಗಮನಿಸಿರಿ. ನಿಮ್ಮ ಊರುಗಳಿಗೆ ಹಿಂತಿರುಗಿ ಬನ್ನಿ. ನನ್ನ ವಧುವಾದ ಇಸ್ರೇಲೇ, ಮನೆಗೆ ಬಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು. ಅಧ್ಯಾಯವನ್ನು ನೋಡಿ |